ಬ್ರೇಕಿಂಗ್ ನ್ಯೂಸ್
02-06-22 10:27 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ಅರಣ್ಯ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಆಂಧ್ರ ಪ್ರದೇಶ ಮೂಲದ ಈಚರ್ ಲಾರಿಯಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ರಕ್ತಚಂದನ ಮರದ ದಿಮ್ಮಿಗಳನ್ನು ಕಿನ್ನಿಗೋಳಿ ಸಮೀಪದ ಕಿಲ್ಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದ್ದು ಏಳು ಮಂದಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ರಿಜಿಸ್ಟರ್ ಸಂಖ್ಯೆ ಹೊಂದಿರುವ ಈಚರ್ ಲಾರಿಯಲ್ಲಿ ಬರೋಬ್ಬರಿ 8308 ಕೇಜಿ ತೂಕದ ರಕ್ತಚಂದನ ಮರದ ದಿಮ್ಮಿಗಳನ್ನು ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಿಸಲಾಗುತ್ತಿತ್ತು. ಅದಕ್ಕೆ ಬೆಂಗಾವಲಾಗಿದ್ದ ತಮಿಳುನಾಡು ರಿಜಿಸ್ಟರ್ ಸಂಖ್ಯೆ ಹೊಂದಿದ್ದ ಮಹೀಂದ್ರಾ ಮೊರಾಜೊ ವಾಹನವನ್ನೂ ವಶಕ್ಕೆ ಪಡೆಯಲಾಗಿದ್ದು, ಎರಡೂ ವಾಹನದಲ್ಲಿದ್ದ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದ ರಕ್ತಚಂದನದ ಮೌಲ್ಯ 4.15 ಕೋಟಿ ಆಗಿರುತ್ತದೆ.
ಬಂಧಿತರನ್ನು ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ ರಾಜ್, ದಿನೇಶ್ ಕುಮಾರ್, ಕುಂಞ ಮಹಮದ್, ಅನಿಲ್ ಕುಮಾರ್, ಶಮೀರ್ ಎಸ್. ಎಂದು ಗುರುತಿಸಲಾಗಿದ್ದು ಒಬ್ಬ ಆರೋಪಿ ಕಾರ್ಯಾಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಜೂನ್ 1ರಂದು ಕಿಲ್ಪಾಡಿ ಮೂಲಕ ಕೆಂಚನಕೆರೆ ಎಂಬಲ್ಲಿಂದ ಲಾರಿ ಬರುತ್ತಿದ್ದಾಗ ಅಡ್ಡಹಾಕಿದ್ದಾರೆ. ಮರದ ದಿಮ್ಮಿಯನ್ನು ಆಂಧ್ರಪ್ರದೇಶದಿಂದ ಮಂಗಳೂರಿಗೆ ತರಲಾಗುತ್ತಿತ್ತು ಎನ್ನುವ ಮಾಹಿತಿ ಇದೆ. ಅರಣ್ಯಾಧಿಕಾರಿಗಳ ಅಪರೂಪದ ಕಾರ್ಯಾಚರಣೆ ಬಗ್ಗೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Officials of the forest department have arrested seven people while illegally transporting the red sanders worth Rs 4.15 crore in Kenchana Kere of Kilpadi village of Mangaluru taluk. Officials seized 315 logs of red sanders from the possession of the accused on June 1 at 6 pm.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm