ಬ್ರೇಕಿಂಗ್ ನ್ಯೂಸ್
06-06-22 08:49 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 6 : ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಯಲ್ಲಿ ಮತ್ತೊಂದು ಎಫ್ ಐ ಆರ್ ದಾಖಲು ಮಾಡಿದ್ದಾರೆ.
ಸಿಐಡಿ ವಿಭಾಗದ ಡಿವೈಎಸ್ಪಿ ಶಿವಕುಮಾರ್ ದೂರಿನ ಮೇರೆಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಕಲಾಸಿಪಾಳ್ಯ ಠಾಣೆಯ ಕಾನ್ಸ್ ಟೇಬಲ್ ಹರೀಶ್, ಎಫ್ ಡಿಎ ಹರ್ಷ ಮತ್ತು ಹಣದ ಡೀಲ್ ಮಾಡಿದ್ದ ಮನೋಜ್ ಎಂಬಾತನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸಿಐಡಿ ಅಧಿಕಾರಿಗಳು ಕಲಾಸಿಪಾಳ್ಯ ಕಾನ್ಸ್ ಟೇಬಲ್ ಹರೀಶ್ ನನ್ನು ಬಂಧಿಸಿದ್ದಾರೆ.
ಪಿಎಸ್ ಐ ಪರೀಕ್ಷೆಯಲ್ಲಿ ಅಭ್ಯರ್ಥಿಯಾಗಿದ್ದ ಹರೀಶ್, ಪಿಎಸ್ಐ ಹುದ್ದೆ ಪಡೆಯಲು 50 ಲಕ್ಷಕ್ಕೆ ಡೀಲ್ ಮಾಡಿದ್ದ ಎನ್ನುವ ಆರೋಪ ಇದೆ. ಇದಕ್ಕಾಗಿ ಡೀಲ್ ಕುದುರಿಸಿದ್ದ ಮನೋಜ್ ಗೆ 30 ಲಕ್ಷ ಹಣ ನೀಡಿದ್ದ. ತಾನು ಪರೀಕ್ಷೆ ಬರೆದಿದ್ದ ಓಎಂಆರ್ ಶೀಟನ್ನು ತಿದ್ದಲು ಹಣ ನೀಡಿದ್ದ. ಅಲ್ಲದೆ, ಎಕ್ಸಾಂ ವೇಳೆ ಉತ್ತರ ಪತ್ರಿಕೆಯನ್ನು ಖಾಲಿ ಬಿಟ್ಟು ಬಂದಿದ್ದ.

ಬಳಿಕ ಸಿಐಡಿ ಕಚೇರಿಯಲ್ಲಿ ಎಫ್ ಡಿ ಎ ಹರ್ಷ ಸಹಾಯ ಪಡೆದು ಓಎಂಆರ್ ಶೀಟನ್ನು ತಿದ್ದಿದ್ದ ಎನ್ನುವ ಮಾಹಿತಿ ಸಿಐಡಿ ತನಿಖೆಯಲ್ಲಿ ಲಭಿಸಿತ್ತು. ಇತ್ತೀಚೆಗೆ ಓಎಂಆರ್ ಶೀಟ್ ವ್ಯತ್ಯಾಸ ಕಂಡುಬಂದಿದ್ದ ಕಾರಣ ಹರೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಪ್ರತ್ಯೇಕ ಎಫ್ ಐಆರ್ ದಾಖಲಿಸಿದ್ದು ಮೂವರನ್ನೂ ಬಂಧಿಸುವ ಸಾಧ್ಯತೆಯಿದೆ. ಹರೀಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದರು.

ಇದೇ ವೇಳೆ, ಸಚಿವ ಅಶ್ವತ್ಥ ನಾರಾಯಣ ಸಂಬಂಧಿ ಎಂದು ಸುದ್ದಿಯಾಗಿದ್ದ ಪಿಎಸ್ಐ ಪರೀಕ್ಷೆ ಬರೆದು ಓಎಂಆರ್ ಶೀಟ್ ವ್ಯತ್ಯಾಸದಿಂದಾಗಿ ಎಫ್ಐಆರ್ ದಾಖಲಾಗಿದ್ದ ದರ್ಶನ್ ಗೌಡನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ದರ್ಶನ್ ಗೌಡ ಪ್ರಕರಣದಲ್ಲಿ ಸಚಿವ ಅಶ್ವತ್ಥ ನಾರಾಯಣ ಅವರ ಸೋದರ ಡೀಲ್ ಕುದುರಿಸಿದ್ದಾರೆ, ಅವರನ್ನೂ ಸಿಐಡಿಯವರು ವಿಚಾರಣೆಗೆ ಕರೆಸಿದ್ದರು ಎನ್ನುವ ವದಂತಿಗಳು ಹರಡಿದ್ದವು. ಆದರೆ ಆ ವದಂತಿಯನ್ನು ಸಚಿವರು ನಿರಾಕರಿಸಿದ್ದರು.
Karnataka Psi scam, Police Constable arested, 50 lakh deal exposed.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:32 am
HK News Staffer
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm