ಬ್ರೇಕಿಂಗ್ ನ್ಯೂಸ್
08-06-22 12:12 pm HK News Desk ಕ್ರೈಂ
ಹೈದರಾಬಾದ್, ಜೂ 08: ಹೈದರಾಬಾದ್'ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಶಾಸಕನ ಪುತ್ರ ಸೇರಿ ಎಲ್ಲಾ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ 6 ಮಂದಿಯ ಪೈಕಿ ನಾಲ್ವರು ಬಾಲಾರೋಪಿಗಳಾಗಿದ್ದು, ಮತ್ತೊಬ್ಬ ವಯಸ್ಕ ಆರೋಪಿಯನ್ನು ಸದುದ್ದೀನ್ ಮಲಿಕ್ (18 ವರ್ಷ) ಎಂದು ಗುರ್ತಿಸಲಾಗಿದೆ.
ಪ್ರಕರಣದ ಆರನೇ ಬಾಲಾರೋಪಿಯಾಗಿ ಎಐಎಂಐಎಂ ಶಾಸಕನ ಪುತ್ರನನ್ನು ಹೆಸರಿಸಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದುದ್ದೀನ್ ಮಲಿಕ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), 323 (ಆಘಾತ ಉಂಟುಮಾಡಲು ಕಾರಣರಾಗುವುದು), 366 (ಅಪಹರಣ) ಹಾಗೂ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ವಿಡಿಯೊ ಚಿತ್ರೀಕರಣ ಮಾಡಿದ ಆರೋಪದಲ್ಲಿ ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ಸಿ.ವಿ.ಆನಂದ್ ಅವರು, ಶಾಸಕರ ಪುತ್ರ ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ, ಆದರೆ ಇನ್ನೋವಾದಲ್ಲಿ ಅಪರಾಧ ನಡೆಯುವುದಕ್ಕೂ ಮೊದಲು, ಶಾಸನನ ಪುತ್ರ ಕಾರಿನಲ್ಲಿ ಸಂತ್ರಸ್ತೆಯ ಜೊತೆಯಲ್ಲಿದ್ದಾಗ ಕಿರುಕುಳ ನೀಡಿದ್ದಾನೆ. ನಂತರ ಆತನ ಜೊತೆಗಿದ್ದ ಮೂವರು ಸ್ನೇಹಿತರು ಆಕೆಗೆ ಕಿರುಕುಳ ನೀಡಿದ್ದಾರೆ. ಬಾಲಕಿಯ ಕುತ್ತಿಗೆ ಹಾಗೂ ದೇಹದ ಇತರೆ ಭಾಗಗಳಲ್ಲಿ ಗಾಯಗಳಾಗಿವೆ ಎಂದು ಹೇಳಿದ್ದಾರೆ.
ಅಪರಾಧದಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಬಲವಾದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಮತ್ತು ನ್ಯಾಯಾಲಯದಲ್ಲಿ ಪ್ರಕರಣವನ್ನು ಬಲಪಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಶಾಸಕನ ಪುತ್ರ ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಪೊಲೀಸರು ನಿರಾಕರಿಸಿದ್ದಾರೆ.
ಪ್ರಕರಣ ಸೂಕ್ಷ್ಮವಾಗಿದ್ದು, ಸಂತ್ರಸ್ತೆಯ ಹೇಳಿಕೆಗಳು, ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರೆ ವಿಡಿಯೋಗಳನ್ನು ಸಾಕ್ಷ್ಯವಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರತಿಯೊಬ್ಬರ ಆರೋಪ ಸಾಬೀತು ಮಾಡಲು ಪೊಲೀಸರು ಕಾಲಾವಕಾಶ ತೆಗೆದುಕೊಂಡಿದ್ದಾರೆ. ತನಿಖೆಯು ನ್ಯಾಯಯುತ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ಯಾರೊಬ್ಬರ ವಿರುದ್ಧ ಕ್ರಮ ಕೈಗೊಳ್ಳದಂತೆ ಯಾವುದೇ ಹಿಂಜರಿಕೆ ಅಥವಾ ಯಾವುದೇ ಒತ್ತಡವಿಲ್ಲಗಳಿಲ್ಲ ಎಂದಿದ್ದಾರೆ.
ಪಾರ್ಟಿಯ ದಿನ ಹುಡುಗಿ ತನ್ನ ಸ್ನೇಹಿತೆಯೊಂದಿಗೆ ಪಬ್'ಗೆ ಹೋಗಿದ್ದಾಳೆ. ಈ ವೇಳೆ ಹುಡುಗಿಯ ಸ್ನೇಹಿತೆ ಇತರರೊಂದಿಗೆ ಬ್ಯುಸಿಯಾಗಿದ್ದಾಳೆ. ನಂತರ ಹುಡುಗಿ ಇತರೆ ಯುವತಿಯೊಂದಿಗೆ ಮಾತನಾಡುತ್ತಿದ್ದಾಗ ಸ್ಥಳಕ್ಕೆ ಬಂದ ಬಾಲಕರ ಗುಂಪೊಂದು ಆಕೆಯೊಂದಿಗೆ ಅಸಭ್ಯವಾಗಿ ಮಾತನಾಡಲು ಆರಂಭಿಸಿದ್ದಾರೆ. ಇದೇ ವೇಳೆ ಸಾದುದ್ದೀನ್ ಮಲಿಕ್ ಕೂಡ ಬಂದಿದ್ದಾನೆ. ಹುಡುಗರ ಅಸಭ್ಯ ವರ್ತನೆ ಹಿನ್ನೆಲೆಯಲ್ಲಿ ಬಾಲಕಿ ಪಬ್ ನಿಂದ ಹೊರಗೆ ಬಂದಿದ್ದಾಳೆ.
ಬಾಲಕಿ ಕ್ಯಾಬ್ ನಲ್ಲಿ ಒಬ್ಬಂಟಿಯಾಗಿ ಹೋಗುವುದನ್ನು ನೋಡಿದ ಆರೋಪಿಗಳು ಆಕೆಯನ್ನು ಹಿಂಬಾಲಿಸಿದ್ದಾರೆ. ಬಳಿಕ ಆಕೆಯನ್ನು ತಮ್ಮ ಕಾರಿಗೆ ಹತ್ತಿಸಿಕೊಂಡು ಒಬ್ಬರಾದ ಬಳಿಕ ಒಬ್ಬರಂತೆ ಆಕೆಗೆ ಕಿರುಕುಳ ನೀಡಿದ್ದಾರೆ. ಕಿರುಕುಳ ನೀಡಿದ ಬಳಿಕ ತೆಲಂಗಾಣ ವಕ್ಫ್ ಬೋರ್ಡ್'ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ಅಧಿಕೃತ ವಾಹನವಾದ ಹಿನ್ನೆಲೆಯಲ್ಲಿ ರೆಸ್ಟೋರೆಂಟ್ ವೊಂದರ ಬಳಿ ಬಾಲಕಿಯನ್ನು ಇನ್ನೋವಾ ಕಾರಿಗೆ ಸ್ಥಳಾಂತರಿಸಿದ್ದಾರೆ.
ಬಳಿಕ ಜುಬಿಲಿ ಹಿಲ್ಸ್ನ ರೋಡ್ ನಂ 44 ರಲ್ಲಿನ ನಿರ್ಜನ ಪ್ರದೇಶವೊಂದಕ್ಕೆ ಕಾರನ್ನು ತೆಗೆದುಕೊಂಡ ಬಂದ ಆರೋಪಿಗಳು ಒಬ್ಬರ ನಂತರ ಒಬ್ಬರಂತೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರದ ಬಳಿಕ ಬಾಲಕಿಯನ್ನು ಮರಳಿ ಪಬ್ ಬಳಿ ಡ್ರಾಪ್ ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಳಿಕ ಕಾರನ್ನು ಫಾರ್ಮ್ ಹೌಸ್ ಒಂದರ ಬಳಿ ನಲ್ಲಿಸಿದ್ದಾರೆ.
ಕಾರನ್ನು ಬಿಟ್ಟು ಹೋಗಲಾಗಿತ್ತೇ ಅಥವಾ ಪ್ರಕರಣದಲ್ಲಿ ಯಾರಾದರೂ ಆರೋಪಿಗಳಿಗೆ ಸಹಾಯ ಮಾಡುತ್ತಿದ್ದಾರೆಯೇ, ಪ್ರಕರಣದಲ್ಲಿ ಸಾಕ್ಷ್ಯಗಳ ಹತ್ತಿಕ್ಕಲು ಯತ್ನಗಳು ನಡೆದಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಮನೆಯ ಮುಂದೆ ಇನ್ನೋವಾ ಕಾರನ್ನು ನಿಲ್ಲಿಸಲಾಗಿದೆ.
ಇನ್ನೋವಾವನ್ನು ಓಡಿಸಿ ಒಬ್ಬರ ನಂತರ ಒಬ್ಬರಂತೆ ಅತ್ಯಾಚಾರ ಎಸಗಿದ್ದಾರೆ. ಅಪರಾಧದ ನಂತರ, ಅವರು ಅವಳನ್ನು ಪಬ್ಗೆ ಡ್ರಾಪ್ ಮಾಡಿ ಸ್ಥಳದಿಂದ ತೆರಳಿದರು. ನಂತರ ತೋಟದ ಮನೆಗೆ ತೆರಳಿ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.
ಸಾಕ್ಷ್ಯಗಳ ನಾಶಪಡಿಸಲು ಆರೋಪಿಗಳಿಗೆ ಯಾರಾದರೂ ಸಹಾಯ ಮಾಡಿದ್ದರೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಆರೋಪಗಳು ಕೇಳಿ ಬಂದಿರುವಂತೆ ಕಾರು ಅಧಿಕೃತ ವಾಹನವೇ ಎಂಬುದರ ಕುರಿತಂತೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಲಕಿಯೊಂದಿಗೆ ಪಬ್'ಗೆ ಬಂದಿದ್ದ ಮತ್ತೊಬ್ಬ ಬಾಲಕಿಗೆ ಯಾವುದೇ ಕಿರುಕುಗಳನ್ನು ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ.
The Hyderabad police which is probing the gangrape of a 17-year old girl at Jubilee Hills announced that they have arrested two more people in connection with the case. With these latest arrests, a total of six persons have been arrested so far, Hyderabad Commissioner of Police CV Anand said in a press conference on the night of June 7, Tuesday. Of the six people arrested, five are minors or children in conflict with law (CCL), while one is an adult.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm