ಬ್ರೇಕಿಂಗ್ ನ್ಯೂಸ್
01-10-20 02:30 pm Headline Karnataka News Network ಕ್ರೈಂ
ಬಲರಾಂಪುರ, ಅಕ್ಟೋಬರ್ 1: ಹತ್ರಾಸ್ ಅತ್ಯಾಚಾರ ಪ್ರಕರಣ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಈ ಘಟನೆ ನಡೆದಿದೆ. ಕಾಲೇಜಿನ ಅಡ್ಮೀಷನ್ಗೆ ಹೋದ ಯುವತಿ ಹಿಂತಿರುಗುವ ವೇಳೆ ಇಬ್ಬರು ಪುರುಷರು ದಲಿತ ಜನಾಂಗಕ್ಕೆ ಸೇರಿದ ಯುವತಿಯ ಮೇಲೆ ಎರಗಿದ್ದು ಗಂಭೀರ ಸ್ಥಿತಿಯಲ್ಲಿ ಈಕೆ ಮನೆ ಸೇರಿದ್ದಳು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ದೇವ್ ರಂಜನ್ ವರ್ಮ ಹೇಳಿದ್ದಾರೆ.
ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯವರು ಪೊಲೀಸರಿಗೆ ವಿಷಯ ವರದಿ ಮಾಡಿದಾಗ ಯುವತಿಯ ಕುಟುಂಬದವರು ಆಕೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂದು ತಿಳಿಸಿದರು. ಆರೋಪಿಗಳಾದ ಶಾಹಿದ್ ಮತ್ತು ಸಾಹಿಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವರ್ಮ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಹತ್ರಾಸ್ ಘಟನೆ ಬಳಿಕ ಮತ್ತೊಬ್ಬ ಮಗಳು ಬಲರಾಂಪುರದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾಗಿದ್ದಾಳೆ. ಶ್ರದ್ಧಾಂಜಲಿ! ಎಂದು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇಂಜೆಕ್ಷನ್ ನೀಡಿ ಅತ್ಯಾಚಾರ:
ಬುಧವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ ತಾಯಿ, ‘ಅತ್ಯಾಚಾರಿಗಳು ಮಗಳ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ’ ಎಂದು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಶವ ಪರೀಕ್ಷೆಯಲ್ಲಿ ಇದು ದೃಢಪಟ್ಟಿಲ್ಲ ಎಂದಿದ್ದಾರೆ.
ಕಾಲೇಜಿಗೆ ಸೇರಲು ನನ್ನ ಮಗಳು ಹೋಗಿದ್ದಳು. ಬರುವಾಗ ಮೂವರು ಅವಳನ್ನು ಅಪಹರಿಸಿ ತಮ್ಮ ಕೊಠಡಿಗೆ ಒಯ್ದಿದ್ದಾರೆ. ಅಲ್ಲಿ ಅವಳಿಗೆ ಇಂಜೆಕ್ಷನ್ ನೀಡಿ ಅತ್ಯಾಚಾರ ಮಾಡಿದ್ದಾರೆ. ನಂತರ ಅವಳನ್ನು ಇ– ರಿಕ್ಷಾದಲ್ಲಿ ಮನೆಗೆ ಕಳುಹಿಸಿದ್ದಾರೆ. ಅವಳನ್ನು ಮನೆಯ ಹತ್ತಿರ ಬಿಟ್ಟು ರಿಕ್ಷಾ ತೆರಳಿದೆ. ನನ್ನ ಮಗಳು ನಿಂತುಕೊಳ್ಳುವ ಮತ್ತು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ‘ ಎಂದು ತಾಯಿ ವಿವರಿಸಿದ್ದಾರೆ.
ಶವಪರೀಕ್ಷೆ ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸ್ಥಳೀಯ ಮುಖಂಡರು ಸಂತ್ರಸ್ತೆ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ರೂ. 6 ಲಕ್ಷ ಆರ್ಥಿಕ ನೆರವು ಒದಗಿಸುವ ಪತ್ರವನ್ನು ನೀಡಿ, ತಾಯಿಯ ಹೆಸರಿಗೆ ಹಣವನ್ನು ಮಧ್ಯಾಹ್ನದ ವೇಳೆಗೆ ವರ್ಗಾಯಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm