ಬ್ರೇಕಿಂಗ್ ನ್ಯೂಸ್
31-07-22 12:47 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ಭೀಕರ ಹತ್ಯೆಗೊಳಗಾದ ಮಹಮ್ಮದ್ ಫಾಜಿಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕನನ್ನು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ನಿವಾಸಿ ಅಜಿತ್ ಡಿಸೋಜ ಬಂಧಿತನಾಗಿದ್ದು ಆತ ತನ್ನ ಹುಂಡೈ ಇಯೋನ್ ಕಾರನ್ನು ಬಾಡಿಗೆ ಕೊಟ್ಟಿದ್ದ. ಆರೋಪಿಗಳು ಕಾರನ್ನು ಪಡೆದು ಕೊಲೆ ಕೃತ್ಯ ಎಸಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಹುಂಡೈ ಇಯೋನ್ ಕಾರು ಎನ್ನುವುದು ತಿಳಿದುಬಂದಿತ್ತು. ಆದರೆ ಕಾರಿನ ನಂಬರ್ ಸ್ಪಷ್ಟವಾಗಿ ತಿಳಿದುಬಂದಿರಲಿಲ್ಲ. ಹೀಗಾಗಿ ಆ ಮಾಡೆಲಿನಲ್ಲಿ ಮಂಗಳೂರಿನಲ್ಲಿ ನೋಂದಣಿಯಾದ ಕಾರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದೆವೆ. ಎಂಟಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವನ್ನು ಸುರತ್ಕಲ್ ಠಾಣೆಯಲ್ಲಿ ಇರಿಸಲಾಗಿದೆ.



ಕೊನೆಗೆ, ಅಜಿತ್ ಡಿಸೋಜ ಕಾರನ್ನು ಬಾಡಿಗೆ ಕೊಡುವ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿತ್ತು. ಆತನ ಕಾರನ್ನು ಬಾಡಿಗೆ ಪಡೆದವರೇ ಕೃತ್ಯ ಎಸಗಿದ್ದರು ಎನ್ನೋದು ಖರೆಯಾಗುತ್ತಲೇ ಕಾರಿನ ಮಾಲಕನನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಕೃತ್ಯಕ್ಕೆ ಬಳಸಿದ್ದ ಕಾರು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಅದು ಇನ್ನೂ ಆರೋಪಿಗಳ ಬಳಿಯೇ ಇರುವ ಶಂಕೆಯಿದೆ. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು ಶೋಧ ನಡೆಸಲಾಗಿದೆ. ನಾವು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.


ಸದ್ಯಕ್ಕೆ ಬಂಧಿಸಿರುವ ಆರೋಪಿಯನ್ನು ಇನ್ನೂ ವಿಚಾರಣೆಗೆ ಒಳಪಡಿಸಲಿದ್ದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುತ್ತೇವೆ. ಈತನಿಗೆ ಒಬ್ಬ ಆರೋಪಿಯ ಪರಿಚಯ ಇದೆ, ಆ ವ್ಯಕ್ತಿ ಯಾವಾಗಲೂ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದರ ಆಧಾರದಲ್ಲಿ ನಾವು ತನಿಖೆ ನಡೆಸ್ತೀವಿ. ಶೀಘ್ರದಲ್ಲೇ ಆರೋಪಿಗಳ ಬಂಧನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Surathkal Fazil Murder case, car owner Ajith Dsouza who had rented the car for the murder has been arrested Mangalore Police. The car is still missing as the accused have escaped using the car. The police are in search of the missing car and the accused.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm