ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm