ಬ್ರೇಕಿಂಗ್ ನ್ಯೂಸ್
22-08-22 01:10 pm HK News Desk ಕ್ರೈಂ
ಗದಗ, ಆಗಸ್ಟ್ 22: ಪಿಎಸ್ಐ ಅಕ್ರಮದ ಗಬ್ಬುನಾತ ಆರುವ ಮುನ್ನವೇ ಮತ್ತೊಂದು ಇಲಾಖೆಯಲ್ಲಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಅಕ್ರಮದ ಆರೋಪ ಕೇಳಿಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆದಿದ್ದ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆಗಸ್ಟ್ 7ರಂದು ಗದಗ-ಬೆಟಗೇರಿ ಸೇರಿದಂತೆ 21 ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆದಿತ್ತು. ಆ ಪೈಕಿ ಗದಗ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎನ್ನಲಾಗುತ್ತಿದ್ದು ತಂದೆ, ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಮುನಿಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವಣೆ ಮತ್ತು ಅವರ ಮಗ ಸಮೀತ್ ಕುಮಾರ್ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎನ್ನಲಾಗಿದ್ದು ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಮಿತ್ ಕುಮಾರ್ ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಎಂಟ್ರಿ ಕೊಟ್ಟು ಮೊಬೈಲ್ ನಲ್ಲಿ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ಆಬಳಿಕ ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆ ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಆತನ ತಂದೆಯೇ ಕಾಲೇಜಿನ ಉಪ ಪ್ರಾಂಶುಪಾಲ ಆಗಿರುವುದರಿಂದ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಕುಲಕರ್ಣಿ ಅವರನ್ನು ಕೂಡ ವಿಚಾರಣೆಗೆ ಕರೆಸಿದ್ದಾರೆ.
ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ತಂದೆ-ಮಗನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದರಿಂದ ಕೆಪಿಟಿಸಿಎಲ್ ನಲ್ಲೂ ಪಿಎಸ್ಐ ಹಗರಣದ ಮಾದರಿಯಲ್ಲೇ ಅಕ್ರಮ ನಡೆದಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ.
The Karnataka Police have arrested the vice-principal of a municipal college in Gadag-Betageri and his son for allegedly leaking the question paper of a competitive examination held to hire junior assistants for Karnataka Power Transmission Corporation Limited (KPTCL), officials said Monday. The police have taken Maruti Sonavane, the vice-principal of Gadag Municipal College, and his son Samith Kumar in custody for further questioning.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm