ಬ್ರೇಕಿಂಗ್ ನ್ಯೂಸ್
23-08-22 10:09 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 23 : 15ಕ್ಕೂ ಹೆಚ್ಚು ದನ ಕಳ್ಳತನ ಪ್ರಕರಣಗಳಲ್ಲಿ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿಗೆ ತೆರಳಿದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಬೆಂಗ್ರೆ ಕಸಬಾ ನಿವಾಸಿ ಕುಖ್ಯಾತ ಆರೋಪಿ ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಬಂಧಿತ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆ ಹಾಗೂ ದ.ಕ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದು ಜಾಮೀನು ಪಡೆದು ಹೊರಗಿದ್ದ. ಈ ವೇಳೆ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಸಿಸಿಬಿ ಪೊಲೀಸರು ಆತನನ್ನು ದಸ್ತಗಿರಿ ಮಾಡಲು ತೆರಳಿದ ಸಮಯ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವಿರುದ್ಧ ಮಂಗಳೂರು ನಗರ ವ್ಯಾಪ್ತಿಯ ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಕಂಕನಾಡಿ ನಗರ, ಉಳ್ಳಾಲ, ಪಣಂಬೂರು, ಬಜ್ಪೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ 15 ಹೆಚ್ಚು ದನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ಏಳು ತಿಂಗಳಿನಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
Mangaluru CCB police personnel have arrested a notorious cattle thief Abdul Kabeer alias Parivala Kabeer(35), a resident of Bengre, Kasba, Mangaluru.
12-08-26 06:06 pm
HK Staffer
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm