ಬ್ರೇಕಿಂಗ್ ನ್ಯೂಸ್
27-08-22 11:40 am Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 27 : ಪ್ರತಿಷ್ಠಿತ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ.
ಮುರುಘಾ ಮಠದ ವತಿಯಿಂದ ನಡೆಸಲ್ಪಡುವ ವಿದ್ಯಾರ್ಥಿ ನಿಲಯದಲ್ಲಿರುವ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಮಠದ ಸ್ವಾಮೀಜಿ ಮುರುಘಾ ಶರಣರು ಸೇರಿದಂತೆ ಅಲ್ಲಿನ ಆಡಳಿತ ವರ್ಗದ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯರಿಗೆ ಜೀವ ಬೆದರಿಕೆ ಇದ್ದ ಕಾರಣ ಕೆಲವು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ಹೇಳಿಕೊಂಡು ಬಂದಿದ್ದರು. ತಮ್ಮನ್ನು ಮಠಕ್ಕೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಮಕ್ಕಳು ಹೇಳಿಕೊಂಡಿದ್ದರು. ಕೂಡಲೇ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಗಮನಕ್ಕೆ ತಂದಿದ್ದರು.
ಅದರಂತೆ, ಚೈಲ್ಡ್ ಕೇರ್ ಸೆಂಟರಿನವರು ಮೈಸೂರಿನ ಠಾಣೆಯಲ್ಲೇ ದೂರು ನೀಡಿ, ಕೇಸು ದಾಖಲಿಸಿದ್ದಾರೆ. ಪ್ರಕರಣವನ್ನು ಚಿತ್ರದುರ್ಗ ಸ್ಥಳೀಯ ಠಾಣೆಗೆ ವರ್ಗಾಯಿಸುವ ಸಾಧ್ಯತೆಯಿದೆ. ಆದರೆ ಮಕ್ಕಳಿಗೆ ಅಲ್ಲಿ ದೂರು ನೀಡಲು ಭಯವಿದೆ, ಹಾಗಾಗಿ ಇಲ್ಲಿನ ಪೊಲೀಸರೇ ತನಿಖೆ ನಡೆಸಬೇಕು ಎಂದು ಒಡನಾಡಿ ಸಂಸ್ಥೆಯವರು ಹೇಳಿದ್ದರು.
ಮುರುಘಾ ಮಠದ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು ಸ್ವಾಮೀಜಿಯನ್ನು ಪರಮಪೂಜ್ಯರು ಎಂದು ನಂಬುವ ಭಕ್ತಗಣ ಇದೆ. ಹೀಗಾಗಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸು ದಾಖಲಾಗಿರುವುದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾದರೆ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಸ್ವಾಮೀಜಿಯನ್ನು ಬಂಧಿಸುವ ಸಾಧ್ಯತೆಯಿದೆ.
ಎಫ್ಐಆರ್ ಪ್ರಕಾರ, 2019 ಜನವರಿಯಿಂದ 2022ರ ಜೂನ್ ವರೆಗೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಪ್ರಕರಣದಲ್ಲಿ ಎವನ್ ಆರೋಪಿಯಾಗಿ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ, ಎರಡನೇ ಆರೋಪಿಯಾಗಿ ಹಾಸ್ಟೆಲ್ ವಾರ್ಡನ್ ರಶ್ಮಿ, ದೌರ್ಜನ್ಯಕ್ಕೆ ಸಹಾಯ ಮಾಡಿದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.
Continuous sexual harassment to the girls in Muruga Math hostel case filed against swamiji in Mysuru. Girls have been sexually assaulted and later have been threatened. Girls have complained that they have been sexually harassed continuously. The child line has taken up the case and the investigation is in progress.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm