ಬ್ರೇಕಿಂಗ್ ನ್ಯೂಸ್
06-10-20 08:34 pm Headline Karnataka News Network ಕ್ರೈಂ
ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm