ಬ್ರೇಕಿಂಗ್ ನ್ಯೂಸ್
02-09-22 10:34 am HK Desk ಕ್ರೈಂ
ಚಿತ್ರದುರ್ಗ, ಸೆ.2: ಪ್ರೌಢಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಮುರುಘಾಶ್ರೀಗಳನ್ನ ವೈದ್ಯಕೀಯ ಪರೀಕ್ಷೆ ಬಳಿಕ ನಸುಕಿನ 2.50ರ ಸುಮಾರಿಗೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹಾಕಲಾಗಿದೆ. ಈ ವೇಳೆ ಸ್ವಾಮೀಜಿ ಕಾರಾಗೃಹದ ಬಾಗಿಲು ದಾಟುವುದನ್ನು ಕಂಡು ಅಲ್ಲಿ ಸೇರಿದ್ದ ಭಕ್ತರು ಕಣ್ಣೀರು ಹಾಕಿದ್ದಾರೆ.
ಹಳೆ ಬೆಂಗಳೂರು ರಸ್ತೆಯ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಮುರುಘಾ ಶ್ರೀಗಳನ್ನು ಇರಿಸಲಾಗಿತ್ತು. ಆದರೆ ಬೆಳಗ್ಗೆ ದಿಢೀರ್ ಎದೆನೋವೆಂದು ಹೇಳಿ ಸ್ವಾಮೀಜಿ ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ. ಗುರುವಾರ ರಾತ್ರಿ 9.30ರ ವೇಳೆಗೆ ಮಠಕ್ಕೆ ತೆರಳಿದ್ದ ಮೊಳಕಾಲ್ಮೂರು ಪೊಲೀಸರು, ಸ್ವಾಮೀಜಿ ವಶಕ್ಕೆ ಪಡೆದು ವಿಚಾರಣೆಗಾಗಿ 30 ಕಿ.ಮೀ ದೂರದ ಚಳ್ಳಕೆರೆಗೆ ಕರೆದೊಯ್ದಿದ್ದರು. ಬಳಿಕ ಡಿವೈಎಸ್ಪಿ ಕಚೇರಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ಅಲ್ಲಿಂದ ನೇರವಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯರಿಂದ ತಪಾಸಣೆ ನಡೆಸಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರಾಜ ನೇತೃತ್ವದ ವೈದ್ಯರ ತಂಡ, ಎರಡು ಗಂಟೆಗಳ ಕಾಲ ಮೆಡಿಕಲ್ ಟೆಸ್ಟ್ ನಡೆಸಿತ್ರು.
ತನಗೆ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ ಸಮಸ್ಯೆ ಇದ್ದು ಜೈಲಿನ ಬದಲು ಆಸ್ಪತ್ರೆಯಲ್ಲಿ ಇರಿಸಲು ಅವಕಾಶ ನೀಡಬೇಕೆಂದು ಸ್ವಾಮೀಜಿ ಕೇಳಿಕೊಂಡಿದ್ದಾರೆ. ಆದರೆ ಆರೋಗ್ಯ ತಪಾಸಣೆ ಬಳಿಕ ಪೊಲೀಸರು ನೇರವಾಗಿ ಕೋರ್ಟಿಗೆ ಹಾಜರು ಪಡಿಸಿದ್ದರು. ನೂರಾರು ಜನರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಭಕ್ತರು, ಅನುಯಾಯಿಗಳಿಗೆ ಆಸ್ಪತ್ರೆ ಪ್ರವೇಶಿಸದಂತೆ ನಿರ್ಬಂಧ ಹಾಕಲಾಗಿತ್ತು. ಮಧ್ಯರಾತ್ರಿ 1 ಗಂಟೆ ವೇಳೆಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶೆ ಕೋಮಲಾ ಎದುರು ಸ್ವಾಮೀಜಿಯನ್ನು ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿ ಸ್ವಾಮೀಜಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಇದೇ ವೇಳೆ, ಮುರುಘಾ ಶರಣರ ಪರ ಜಾಮೀನು ಕೋರಿ ಸ್ಥಳದಲ್ಲೇ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಆದರೆ ನ್ಯಾಯಾಧೀಶರು ಅರ್ಜಿಯನ್ನು ತಿರಸ್ಕರಿಸಿದ್ದು ಶುಕ್ರವಾರ ಅರ್ಜಿ ಸಲ್ಲಿಸಲು ಸೂಚಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುರುಘಾ ಮಠದ ಪರ ವಕೀಲ ಉಮೇಶ್, ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ ನೀಡಲೆಂದು ಸ್ವಾಮೀಜಿಯೇ ಪೊಲೀಸರಿಗೆ ಶರಣಾಗಿದ್ದಾರೆ. ಮಹಿಳಾ ವಾರ್ಡನ್ ಹೇಳಿಕೆಯ ಆಧಾರದ ಮೇಲೆ ಬಂಧನ ಆಗಿಲ್ಲ. ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಮುರುಘಾ ಶ್ರೀಗಳು ಗೆದ್ದು ಬರುವ ವಿಶ್ವಾಸ ಇದೆ ಎಂದು ಹೇಳಿದ್ಧಾರೆ.
ನಸುಕಿನ ಮೂರು ಗಂಟೆ ಸುಮಾರಿಗೆ ಜೈಲು ಸೇರಿರುವ ಸ್ವಾಮೀಜಿ ಇಂದು ಬೆಳಗ್ಗೆ ಆರು ಗಂಟೆಗೇ ಎದ್ದು ಕುಳಿತಿದ್ದಾರೆ. ಅಷ್ಟರಲ್ಲಿ ಮಠದ ಪರ ವಕೀಲ ಟೂತ್ ಬ್ರಶ್, ಪೇಸ್ಟ್ ಜೈಲಿಗೆ ತಂದು ಕೊಟ್ಟಿದ್ದಾರೆ. ಮುಜುಗರ ಮತ್ತು ತೀವ್ರ ಚಿಂತೆಗೆ ಬಿದ್ದಿರುವ ಸ್ವಾಮೀಜಿ ಜೈಲು ಸೆಲ್ ಒಳಗಡೆ ಅತ್ತಿತ್ತ ಹೆಜ್ಜೆ ಹಾಕುತ್ತಿದ್ದರು. ಬಳಿಕ ಎದೆ ನೋವು ಎಂದು ಜೈಲು ಅಧಿಕಾರಿಗಳಿಗೆ ತಿಳಿಸಿದ್ದು ಅದರಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Chief of Murugha Math Shivamurthy Murugha Sharanaru, who has been arrested for alleged sexual abuse of high school girls and sent to judicial custody, was taken to the district hospital here on Friday after developing some health complications in jail, police sources said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am