ಬ್ರೇಕಿಂಗ್ ನ್ಯೂಸ್
12-09-22 10:37 pm Mangalore Correspondent ಕ್ರೈಂ
ಉಳ್ಳಾಲ, ಸೆ.12 : ಸೋಮೇಶ್ವರ ದೇವಸ್ಥಾನದ ರಥಬೀದಿಯ ಕಡಲ ಕಿನಾರೆಯಲ್ಲಿ ಮರಳು ಕಳ್ಳತನ ತಡೆಯಲು ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾವನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮಡ್ಯಾರು ಸಾಯಿನಗರ ನಿವಾಸಿ ಸೂರಜ್, ಕುರ್ನಾಡು ಮುಡಿಪು ಮದ್ಯನಡ್ಕ ನಿವಾಸಿ ಇಕ್ಬಾಲ್, ತಲಪಾಡಿ ನಿವಾಸಿ ಅಖಿಲ್ ಹಾಗೂ ಸೋಮೇಶ್ವರ ಮೂಡ ನಿವಾಸಿ ಪ್ರಜ್ವಲ್ ಎಂಬ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಸಿಸಿಟಿವಿ ಪುಡಿಗೈದ ಟಿಪ್ಪರನ್ನ ಜಪ್ತಿಗೊಳಿಸಿದ್ದಾರೆ.

ಸಾರ್ವಜನಿಕ ಆಸ್ತಿಯಾದ ಸಿಸಿಟಿವಿಯನ್ನ ಮರಳು ಕಳ್ಳರು ಧ್ವಂಸಗೈದು ಅಟ್ಟಹಾಸ ಮೆರೆದ ಎರಡು ದಿವಸಗಳ ಬಳಿಕ ಉಳ್ಳಾಲ ವಲಯ ಕಂದಾಯ ನಿರೀಕ್ಷಕ ಮಂಜುನಾಥ್ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಂಜುನಾಥ್ ಅವರ ದೂರು ದಾಖಲಿಸಿಕೊಂಡ ಉಳ್ಳಾಲ ಠಾಣೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ತರಾತುರಿಯಲ್ಲಿ ಬಂಧಿಸಿದ್ದಾರೆ.

ಶನಿವಾರ ನಸುಕಿನ ವೇಳೆ ಸೋಮೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನು ಆರೋಪಿಗಳು ಟಿಪ್ಪರ್ ಲಾರಿಯನ್ನ ಹಿಮ್ಮುಖವಾಗಿ ಚಲಾಯಿಸಿ ಧ್ವಂಸಗೊಳಿಸಿದ್ದರು. ಇಷ್ಟೇ ಅಲ್ಲದೆ ಪಕ್ಕದ ಸೋಮೇಶ್ವರ ಮೂಡ ಲೇ ಔಟ್ ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಮರಳು ಕಳ್ಳತನ ತಡೆಯಲು ಹಾಕಿದ್ದ ತಂತಿ ತಡೆ ಬೇಲಿಯನ್ನೂ ಮರಳು ಕಳ್ಳರು ಧ್ವಂಸಗೈದಿದ್ದರು. ಕಳೆದ ಎರಡು ವರುಷಗಳಿಂದಲೂ ಈ ಭಾಗದಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದರೂ ಉಳ್ಳಾಲ ಪೊಲೀಸರು ಏನೂ ಗೊತ್ತಿಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದರು. ಇದೀಗ ಸಿಸಿಟಿವಿ ಧ್ವಂಸ ಪ್ರಕರಣ ರಾಜ್ಯ ಮಟ್ಟದ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತು ಅಂಗೈ ಹುಣ್ಣಿಗೆ ಮುಲಾಮು ಹಚ್ಚುವ ಕೆಲಸ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
Illegal sand miners destroy cc camera and fence at ullal, four arrested and even the truck used for mining sand also has been seized by police in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm