ಬ್ರೇಕಿಂಗ್ ನ್ಯೂಸ್
25-09-22 04:08 pm Mangalore Correspondent ಕ್ರೈಂ
ಮಂಗಳೂರು, ಸೆ.24: ಮಂಗಳೂರಿನ ಪ್ರತಿಷ್ಠಿತ ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಮತ್ತು ನಿರ್ದೇಶಕರ ವಿರುದ್ಧ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬ್ಯಾಂಕಿನಲ್ಲಿ ಬೇಕಾಬಿಟ್ಟಿ ಸಾಲ ಪಡೆದು ಅವ್ಯವಹಾರ ನಡೆಸಿದ್ದಾಗಿ ಕೋರ್ಟಿನಲ್ಲಿ ದಾವೆ ಹೂಡಲಾಗಿತ್ತು. ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.
ಅದರಂತೆ, ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ, ಇತರ ಆರೋಪಿಗಳಾದ ಸವಿಲ್ ಮಸ್ಕರೇನಸ್, ಎಲಿಯಾಸ್ ಸ್ಯಾಂಕ್ಟಿಸ್, ಬೆನೆಡಿಕ್ಟ್ ಐವಾನ್ ಡಿಸೋಜ, ಅನ್ನಾ ಮರಿಯಾ ಲೋಬೊ, ಜೋಸೆಫ್ ಎಂ. ಅನಿಲ್ ಪತ್ರಾವೋ ಮತ್ತು ಬ್ಯಾಂಕಿನ ಜನರಲ್ ಮ್ಯಾನೇಜರ್ ಸುನೀಲ್ ಮಿನೇಜಸ್ ವಿರುದ್ಧ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬ್ಯಾಂಕಿನ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್, ಸ್ಟೀವನ್ ಡಿಸೋಜ ಮತ್ತು ಯೂಜಿನ್ ಲೋಬೊ ಮಂಗಳೂರಿನ ಕೋರ್ಟಿನಲ್ಲಿ ದಾವೆ ಹೂಡಿದ್ದರು.
ಕೋರ್ಟ್ ಆದೇಶ ಪರಿಗಣಿಸಿ ಸೈಬರ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 403, 405, 409, 418, 120 ಬಿ ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕಿನಲ್ಲಿ ಆರ್ ಬಿಐ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಸಾಲ ಎತ್ತಿರುವುದಲ್ಲದೆ, ಪೋರ್ಜರಿ ದಾಖಲೆಗಳನ್ನು ಸೃಷ್ಟಿಸಿ ನೂರು ವರ್ಷಗಳ ಹಳೆಯ ಕೆಥೋಲಿಕ್ ಬ್ಯಾಂಕಿಗೆ ನಷ್ಟ ಉಂಟು ಮಾಡಿದ್ದಾರೆಂದು ದೂರುದಾರರು ಆರೋಪಿಸಿದ್ದರು.
Mangalore FIR Registered against MCC Bank Chairman Anil Lobo for corruption and money laundering. The Court of the 2nd Additional Senior Civil Judge and Chief Judicial Magistrate, Mangalore, has directed the Cyber, Economic and Narcotics Crime Police Station, Mangaluru, to file an FIR and investigate the charges”, stated one of the complainants Steevan D’Souza in his press release dated 23 September 2022.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am