ಬ್ರೇಕಿಂಗ್ ನ್ಯೂಸ್
28-10-22 06:08 pm Bangalore Correspondent ಕ್ರೈಂ
ಬೆಂಗಳೂರು, ಅ.28 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು 98 ಲಕ್ಷ ಮೌಲ್ಯದ ಒಂದು ಕೆಜಿ 985 ಗ್ರಾಂ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಮ್ಮದ್ ಸದ್ದಾಂ(36), ಸಯ್ಯದ್ ತರಬೇಜ್ ಪಾಷಾ(32) ಮತ್ತು ಅಬೀದ್ ಅಜಂ(31) ಮತ್ತು ರಂಜಿತ್ ಸಿಂಗ್ ಬಂಧಿತರು. ಆರೋಪಿಗಳ ಬಂಧನದಿಂದ ಬೆಂಗಳೂರು, ಮೈಸೂರು ಮತ್ತು ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳ 12 ಪ್ರಕರಣಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಸುಮಾರು ಐದಾರು ವರ್ಷಗಳಿಂದ ಮೂವರು ಆರೋಪಿಗಳು ಕಳ್ಳತನ ಪ್ರವೃತ್ತಿಯಲ್ಲಿ ತೊಡಗಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಹಗಲು ವೇಳೆ ಮನೆ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಮಹಮ್ಮದ್ ಸದ್ದಾಂ, ಸಯ್ಯದ್ ತರಬೇಜ್ ಪಾಷಾ ಮತ್ತು ಅಬೀದ್ ಅಜಂ ಈ ಮೂವರು ಆರೋಪಿಗಳು ಈ ಹಿಂದೆ ಸಿಟಿ ಮಾರ್ಕೆಟ್, ಡಿಜೆ ಹಳ್ಳಿ ಮತ್ತು ಹಾಸನ ಟೌನ್ ಪೊಲೀಸ್ ಠಾಣೆಯ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದು, ಜೈಲಿನಿಂದ ಬಿಡುಗಡೆಯಾದ ನಂತರವೂ ಮತ್ತೆ ಕಳವು ಪ್ರಕರಣದಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ಕಂಡುಬಂದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾನು ಕೆಲಸ ಮಾಡುತ್ತಿದ್ದ ಅಂಗಡಿಯ ಕಪಾಟಿನ ನಕಲಿ ಕೀ ಮಾಡಿಟ್ಟುಕೊಂಡು ಮಾಲೀಕರಿಗೆ ತಿಳಿಯದೆ ಕಳೆದ ಐದಾರು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದ ಆರೋಪಿ ರಂಜಿತ್ ಸಿಂಗ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಂಗಡಿಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾಲೀಕರಿಗೆ ಅನುಮಾನ ಬಂದಿದ್ದರಿಂದ ಆರೋಪಿ ಕೆಲಸ ಬಿಟ್ಟು ರಾಜಸ್ತಾನದಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿತ್ತು. ಆರೋಪಿಗಳಿಂದ ಸುಮಾರು 98 ಲಕ್ಷ ರೂ. ಬೆಲೆ ಬಾಳುವ ಒಂದು ಕೆಜಿ 980 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುತ್ತಾರೆ.
Four notorious robbers having 12 cases arrested in Bangalore by CCB.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm