ಬ್ರೇಕಿಂಗ್ ನ್ಯೂಸ್
04-08-20 04:01 am Headline Karnataka News Network ಕ್ರೈಂ
ಮಂಗಳೂರು, ಆಗಸ್ಟ್ 4: ತನಗೆ ಮದುವೆ ಮಾಡಿಸಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ತನ್ನ 4 ಮಂದಿ ರಕ್ತ ಸಂಬಂಧಿಗಳನ್ನೇ ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಡಿಜಿಲ್ಲೆ ಕಾಸರಗೋಡಿನಲ್ಲಿ ನಿನ್ನೆ ರಾತ್ರಿ ನಡಿದಿದೆ.
ಕಾಸರಗೋಡಿನ ಬಾಯಾರು ಸಮೀಪದ ಕನಿಯಾಲ ಗುರುಕುಮೇರಿ ಎಂಬಲ್ಲಿ ಈ ದಾರುಣ ಘಟನೆ ನಡೆದಿದ್ದು , ಕೃಷಿ ಕೂಲಿ ಕಾರ್ಮಿಕ ಸಹೋದರರಾದ ಬಾಬು(65), ವಿಠಲ್ (60), ಸದಾಶಿವ (55) ಹಾಗು ಸೋದರಿ ದೇವಕಿ (58) ಮೃತಪಟ್ಟಿದ್ದಾರೆ. ಮೃತಪಟ್ಟವರ ಪೈಕಿ ದೇವಕಿ ಕೊಲೆ ಆರೋಪಿ ಉದಯನ ಚಿಕ್ಕಮ್ಮ ಹಾಗು ಉಳಿದ ಮೂವರು ಆರೋಪಿಯ ಮಾವಂದಿರಾಗಿದ್ದಾರೆ.
ಆರೋಪಿ ಉದಯ ಅವಿವಾಹಿತನಾಗಿದ್ದು ಕಳೆದ ಕೆಲ ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ತನಗೆ ಮದುವೆ ಮಾಡಿಸಿಲ್ಲ ಎಂದು ತನ್ನ ಸಂಬಂಧಿಗಳೊಂದಿಗೆ ಆಗಾಗ ಆರೋಪಿ ಉದಯ ಜಗಳ ಮಾಡುತ್ತಿದ್ದ. ಕೆಲವು ದಿನಗಳ ಹಿಂದೆ ಆರೋಪಿ ಉದಯ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದ. ನಿನ್ನೆ ರಾತ್ರಿ ಮನೆಗೆ ಬಂದ ಆರೋಪಿ ಉದಯ, ಮನೆಯಲ್ಲಿದ್ದ ಕೊಡಲಿಯನ್ನು ಹಿಡಿದು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಿದ್ದಾನೆ. ಆತನ ಏಟಿಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಬಳಿಕ ತನ್ನ ತಾಯಿಯನ್ನೂ ಕೊಲೆ ಮಾಡಲು ಆರೋಪಿ ತೆರಳಿದ್ದು ಅದೃಷ್ಟವಶಾತ್ ಅವರು ನೆರೆಮನೆಗೆ ಓಡಿಹೋಗಿ ತಪ್ಪಿಕೊಂಡಿದ್ದಾರೆ.

ನೆರೆಮನೆಯವರು ಆಗಮಿಸುವಷ್ಟರಲ್ಲಿ ಆರೋಪಿ ಸುಮಾರು ಅರ್ಧ ಕಿ.ಮೀ. ದೂರ ಓಡಿ ಪರಾರಿಯಾಗಲು ಯತ್ನಿಸಿದ್ದಾನೆ. ಸ್ಥಳೀಯರು ಬಳಿಕ ಸನಿಹದ ಕಟ್ಟತ್ತಾರಿನಿಂದ ಆತನನ್ನು ಹಿಡಿದು ರಿಕ್ಷಾದಲ್ಲಿ ಮನೆಗೆ ಕರೆ ತಂದಿದ್ದಾರೆ. ಆದರೆ ಆತ ಮತ್ತೆ ಪರಾರಿಯಾಗಲೆತ್ನಿಸಿದಾಗ ಕಟ್ಟಿ ಹಾಕಿ ಪೊಲೀಸರಿಗೊಪ್ಪಿಸಿದ್ದಾರೆ.
ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm