ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm