ಬ್ರೇಕಿಂಗ್ ನ್ಯೂಸ್
13-11-22 10:47 pm Mangalore Correspondent ಕ್ರೈಂ
ಪುತ್ತೂರು, ನ.13 : ಒಂದೇ ಬ್ಯಾಂಕಿನಲ್ಲಿ ಬರೋಬ್ಬರಿ 21 ನಕಲಿ ಖಾತೆಗಳನ್ನು ತೆರೆದಿದ್ದಲ್ಲದೆ, ಸಿಬಂದಿಯೇ ಸಾಲ ಒದಗಿಸಿ ಹಣವನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ ಸಿಕ್ಕಿಬಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕಡಬ ತಾಲೂಕಿನ ರಾಮಕುಂಜದಲ್ಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನ ಶಾಖೆಯಲ್ಲಿ ಶಾಖಾ ವ್ಯವಸ್ಥಾಪಕರಾಗಿದ್ದ ಚೇತನ್ ಶರ್ಮಾ ಎಂಬಾತ ಆರೋಪಿ. ಈ ಬಗ್ಗೆ ಮಂಗಳೂರಿನ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ವಲಯ ಕಚೇರಿ ಮ್ಯಾನೇಜರ್ ಅಮಿತ್ ಕುಮಾರ್ ಎಂಬವರು ಕಡಬ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿತ ಬ್ಯಾಂಕ್ ಮ್ಯಾನೇಜರ್ ಚೇತನ್ ಶರ್ಮಾ ಎಂಬಾತ ತಾನು ಕರ್ತವ್ಯದಲ್ಲಿದ್ದ ಬ್ಯಾಂಕ್ನಲ್ಲಿಯೇ ಮಹೇಶ್, ಸವಿತಾ ಶರ್ಮಾ, ರೇಣುಕ, ಅಕ್ಷಯ್ ಎಸ್, ನಿಖಿತಾ ಎಸ್, ರಾಹುಲ್ ಎಸ್, ಉಮಾ ಚತುರ್ವೇದಿ ಎಂಬವರ ಹೆಸರಿನಲ್ಲಿ 21 ನಕಲಿ ಲೋನ್ ಖಾತೆಗಳನ್ನು ತೆರೆದಿದ್ದ. ಅಲ್ಲದೆ, ಯಾವುದೇ ದಾಖಲೆ ಪತ್ರಗಳಿಲ್ಲದೆ ಖಾತೆಗಳನ್ನು ತೆರೆದು ಒಟ್ಟು71,29,350/- ರೂ. ಹಣವನ್ನು ಯಾವುದೇ ದಾಖಲೆಗಳನ್ನು ಪಡೆಯದೇ ಸಾಲ ನೀಡಿದ್ದ. ಆಯಾ ನಕಲಿ ಖಾತೆಗಳಿಗೆ ಹಣ ಜಮಾವಣೆ ಮಾಡಿ, ಆನಂತರ ಬೇರೆ ಬೇರೆ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಎಂದು ದೂರಿನಲ್ಲಿ ವಿವರಿಸಲಾಗಿದೆ.
21 ನಕಲಿ ಲೋನ್ ಖಾತೆಗಳಿಗೆ ಆರೋಪಿ ಒಟ್ಟು 51,31,141/- ರೂ.ಗಳನ್ನು ಜಮೆ ಮಾಡಿದ್ದ. ಈ ಬಗ್ಗೆ ಬ್ಯಾಂಕ್ ಅಡಿಟ್ ಸಮಯದಲ್ಲಿಯೂ ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ಹಣ ಸಂದಾಯ ಮಾಡಿದ ಬಗ್ಗೆ ಪ್ರಾಥಮಿಕ ವಿಚಾರಣೆಯಲ್ಲಿ ಕಂಡುಬಂದಿದೆ.
ಇದೇ ಕಾರಣದಿಂದ ಆರೋಪಿಯನ್ನು 2022 ರ ಮೇ 19 ರಂದು ಬ್ಯಾಂಕಿನ ಸೇವೆಯಿಂದ ಅಮಾನತು ಮಾಡಲಾಗಿತ್ತು. ಆರೋಪಿ ತೆರೆದಿದ್ದ ನಕಲಿ ಖಾತೆಗಳಿಂದ 19,98,208/- ರೂ. ಮರು ಪಾವತಿಯಾಗದೆ ಬಾಕಿ ಇರುತ್ತದೆ. ಆದುದರಿಂದ ನಕಲಿ ಖಾತೆಗಳನ್ನು ತೆರೆದು ಯಾವುದೇ ರೀತಿಯ ಕ್ರಯ, ಆಸ್ತಿಪತ್ರ, ಮೌಲ್ಯಮಾಪನ ವರದಿ, ಕಾನೂನು ಅಭಿಪ್ರಾಯ, ಅಡಮಾನ ತೆಗೆದುಕೊಳ್ಳದೇ ವಸತಿ ಸಾಲ ಮತ್ತು ಭೂಮಿ ಲಕ್ಷ್ಮೀ ಸಾಲ ಇತ್ಯಾದಿ ಸಾಲಗಳನ್ನು ಮಂಜೂರು ಮಾಡಿ ಬ್ಯಾಂಕ್ ಹಣವನ್ನು ದುರುಪಯೋಗಪಡಿಸಿ ಕೊಂಡಿರವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣಾ ಅ.ಕ್ರ 96/2022 ಕಲಂ: ಕಲಂ: 409. 420 ಐಪಿಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
Kadaba IOB Bank Manager accused of cheating, 21 fake accounts opened, 71 lakhs loan sanctioned illegally. A cheating case has been registered against him by Mangalore Indian oversees bank manager Amith to Kadaba police station.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm