ಬ್ರೇಕಿಂಗ್ ನ್ಯೂಸ್
18-11-22 01:55 pm HK News Desk ಕ್ರೈಂ
ಕಾಸರಗೋಡು, ನ.18 : ಮದ್ರಸ ಶಿಕ್ಷಣ ಮುಗಿಸಿ ಮನೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಎಂಟು ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಮೇಲಕ್ಕೆತ್ತಿ ನೆಲಕ್ಕೆ ಬಲವಾಗಿ ಎಸೆದು ಅಮಾನವೀಯವಾಗಿ ವರ್ತಿಸಿದ ಘಟನೆ ಮಂಜೇಶ್ವರದ ಮಂಗಲ್ಪಾಡಿ ಎಂಬಲ್ಲಿ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ಬಾಲಕಿ ತನ್ನ ತಂದೆ ಬರುವುದಕ್ಕಾಗಿ ರಸ್ತೆ ಬದಿ ನಿಂತುಕೊಂಡಿದ್ದಳು. ಈ ವೇಳೆ, ವ್ಯಕ್ತಿಯೊಬ್ಬ ಅಲ್ಲಿಗೆ ಆಗಮಿಸಿ ಬಾಲಕಿಯನ್ನು ಕುತ್ತಿಗೆ ಹಿಡಿದು ಮೇಲಕ್ಕೆತ್ತಿದ್ದು ನೆಲಕ್ಕೆ ಅಪ್ಪಳಿಸಿದ್ದಾನೆ. ಆಬಳಿಕ ಚಿಕ್ಕಪ್ಪ ಬಂದು ಬಾಲಕಿಯನ್ನು ಮನೆಗೆ ಕರೆದೊಯ್ದಿದ್ದ. ಮನೆಯಲ್ಲಿ ವಿಚಾರಿಸಿದಾಗ ಬಾಲಕಿ ಆಗಿರುವ ಘಟನೆ ಬಗ್ಗೆ ತಿಳಿಸಿದ್ದಾಳೆ. ಮನೆಯವರು ಸ್ಥಳಕ್ಕೆ ಬಂದು ಪಕ್ಕದ ಕಟ್ಟಡದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲಿಸಿದಾಗ, ಶಾಕ್ ಆಗಿದ್ದಾರೆ. ಯುವಕನೊಬ್ಬ ಬಾಲಕಿಯನ್ನು ನೆಲಕ್ಕೆ ಅಪ್ಪಳಿಸಿದ್ದು ಅದರಲ್ಲಿ ದಾಖಲಾಗಿತ್ತು. ಬಳಿಕ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಕುಂಜತ್ತೂರು ನಿವಾಸಿ ಅಬೂಬಕ್ಕರ್ ಸಿದ್ದೀಕ್ (30) ಎಂಬಾತನನ್ನು ಬಂಧಿಸಿದ್ದಾರೆ. ಗುರುವಾರ ಬೆಳಗ್ಗೆ ಮದ್ರಸ ಶಿಕ್ಷಣ ಮುಗಿಸಿ ಏಳು ಗಂಟೆಯ ಸುಮಾರಿಗೆ ರಸ್ತೆ ಬದಿಗೆ ಬಂದಿದ್ದಾಗ ಘಟನೆ ನಡೆದಿದ್ದು ಸ್ಥಳದಲ್ಲಿ ಯಾರೂ ಇರದ ಕಾರಣ ಘಟನೆ ಗಮನಕ್ಕೆ ಬಂದಿರಲಿಲ್ಲ. ಬಾಲಕಿಯನ್ನು ಬಳಿಕ ತಪಾಸಣೆ ನಡೆಸುವುದಕ್ಕಾಗಿ ಮಂಗಳೂರು ಆಸ್ಪತ್ರೆಗೆ ಕರೆತರಲಾಗಿದೆ. ಆರೋಪಿಗೂ ಬಾಲಕಿ ಮನೆಯವರಿಗೂ ವೈಯಕ್ತಿಕ ದ್ವೇಷದ ಕಾರಣ ಈ ರೀತಿ ವರ್ತಿಸಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಯುವಕನ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು ಜಾಲತಾಣದಲ್ಲಿ ಸಾರ್ವಜನಿಕರು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಘಟನೆಯನ್ನು ಕೇರಳ ರಾಜ್ಯ ಸರಕಾರ ಗಂಭೀರ ಪರಿಗಣಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.
@TimesNow @republic @IndiaToday meet Aboobakar Siddiqui from Kasaragod who is a madrasa teacher throwing a ittle girl on the ground for net wearing Hijab properly #HijabIsAChoice 🤦♂️ https://t.co/o0nkyVMV6Z
— AbVi (@AbVi70979198) November 18, 2022
Manjeshwar police took a burly man into custody after CCTV footage showed him walking up to an eight-year-old schoolgirl, lifting her with both hands, and flinging her to the ground unprovoked. The girl was waiting for her uncle to pick her up outside Isha-athul Uloom Kendra Madrasa at Udyawar in Manjeshwar.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am