ಬ್ರೇಕಿಂಗ್ ನ್ಯೂಸ್
30-11-22 11:12 pm Mangalore Correspondent ಕ್ರೈಂ
ಮಂಗಳೂರು, ನ.30 : ಉಳ್ಳಾಲದ ಜ್ಯುವೆಲ್ಲರಿ ಒಂದಕ್ಕೆ ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಗ್ಯಾಂಗ್ ನ 9 ಮಂದಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ನ.29ರಂದು ರಾತ್ರಿ ಮಂಗಳೂರು ನಗರದ ತೊಕ್ಕೊಟ್ಟು ಮಂಚಿಲ ಪರಿಸರದ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ “ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ” ನ ವ್ಯಕ್ತಿಗಳು ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸುತ್ತಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿನ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಕಾರ್ಯಾಚರಣೆ ನಡೆಸಿದ್ದರು.
ಬಂಟ್ವಾಳ, ಕನ್ಯಾನ ನಿವಾಸಿ ಭಾಸ್ಕರ ಬೆಳ್ಚಪಾಡ(65), ದಿನೇಶ್ ರಾವಲ್ @ ಸಾಗರ್ @ ದಿಲ್ಲಿ(38), ಜಾರ್ಖಂಡಿನ ಮೊಹಮ್ಮದ್ ಜಾಮೀಲ್ ಶೇಖ್(29), ಮಾಣಿಕಪಾರಾ ನಿವಾಸಿ ಇಂಜಮಾಮ್ ಉಲ್ ಹಕ್(27), ಸೂರತ್ ಮೂಲದ ಬಿಸ್ತ ರೂಪ್ ಸಿಂಗ್ (34), ಕೃಷ್ಣ ಬಹದ್ದೂರ್ ಬೋಗಟಿ (41), ಇಮ್ದದುಲ್ ರಝಾಕ್ ಶೇಖ್, (32), ಬಿವುಲ್ ಶೇಖ್(31), ಇಮ್ರಾನ್ ಶೇಖ್(30) ಎಂಬವರನ್ನು ವಶಕ್ಕೆ ಪಡೆದು ಜ್ಯುವೆಲ್ಲರಿ ದರೋಡೆಯನ್ನು ವಿಫಲಗೊಳಿಸಿದ್ದಾರೆ.
ಆರೋಪಿಗಳೆಲ್ಲರೂ ಉತ್ತರ ಭಾರತ ಮೂಲದ ಕುಖ್ಯಾತ “ಸಾಹೇಬ್ ಗಂಜ್” ದರೋಡೆ ಗ್ಯಾಂಗ್ ನ ಸದಸ್ಯರಾಗಿದ್ದು, ಮಂಗಳೂರು ತೊಕ್ಕೊಟ್ಟಿನ ಸೂಪರ್ ಜ್ಯುವೆಲ್ಲರಿ ಅಂಗಡಿಯನ್ನು ದರೋಡೆ ಮಾಡುವ ಉದ್ದೇಶದಿಂದ ಸುಮಾರು 15 ದಿನಗಳ ಹಿಂದೆ ಮಂಗಳೂರಿಗೆ ರೈಲಿನಲ್ಲಿ ಬಂದು ನಂತರ ತೊಕ್ಕೊಟ್ಟು ಬಳಿಯ ಲಾಡ್ಜ್ ವೊಂದರಲ್ಲಿ ಹಾಗೂ ತೊಕ್ಕೊಟ್ಟು ಮಂಚಿಲ ಬಳಿಯ ವ್ಯಕ್ತಿಯೊಬ್ಬರ ಮನೆಯೊಂದನ್ನು ಬಾಡಿಗೆ ಪಡೆದುಕೊಂಡು ನಂತರ ದರೋಡೆಗೆ ಸಂಚು ರೂಪಿಸಿದ್ದರು. ಉಳ್ಳಾಲದ ಸೂಪರ್ ಗೋಲ್ಡ್ & ಡೈಮಂಡ್ಸ್ ಜ್ಯುವೆಲ್ಲರಿಯನ್ನು ಗುರುತಿಸಿ ದರೋಡೆಗೆ ಬೇಕಾದ ಗ್ಯಾಸ್ ಕಟ್ಟರ್, ಅಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಅಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಗಳಿಂದ ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,90,000/- ಆಗಿರುತ್ತದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇತ್ತೀಚೆಗೆ ಮಂಗಳೂರು ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಆಂಬಿಕಾ ರೋಡ್, ಉಚ್ಚಿಲ ಬಳಿಯಿಂದ ರಾತ್ರಿ ವೇಳೆಯಲ್ಲಿ ಮೂರು ದ್ವಿಚಕ್ರ ವಾಹನದ ಸವಾರರನ್ನು ಅಡ್ಡಗಟ್ಟಿ ಹಿಂದಿ ಭಾಷೆಯಲ್ಲಿ ಬೈದು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಅವರಿಂದ ಸ್ಕೂಟರ್ ಗಳನ್ನು ಬಲವಂತವಾಗಿ ಸುಲಿಗೆ ಮಾಡಿದ್ದರು, ಈ ಸ್ಕೂಟರ್ ನ ಪತ್ತೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಸಮಯ ಇದೇ ಸಾಹೇಜ್ ಗಂಜ್ ದರೋಡೆ ಗ್ಯಾಂಗ್ ನ ಆರೋಪಿಗಳು ಜ್ಯುವೆಲ್ಲರಿ ದರೋಡೆ ನಡೆಸಲು ಸಂಚು ರೂಫಿಸುವ ಸಮಯ ಸ್ಥಳೀಯವಾಗಿ ಓಡಾಟದ ಸಲುವಾಗಿ ಈ ಸ್ಕೂಟರ್ ಗಳ ಸವಾರರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಿ ಉಪಯೋಗಿಸುತ್ತಿದ್ದರು. ಮೇಲ್ಕಂಡ ಮೂರು ಸ್ಕೂಟರ್ ಗಳನ್ನು ಕೂಡಾ ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಆರೋಪಿಗಳ ಪೈಕಿ ಭಾಸ್ಕರ ಬೆಳ್ಚಡ, ದಿನೇಶ್ ರಾವಲ್ @ ಸಾಗರ್ @ ದಿಲ್ಲಿ, ಇಂಜಮಾಮ್ ಉಲ್ ಹಕ್, ಬಿಸ್ತ ರೂಪ್ ಸಿಂಗ್, ಕೃಷ್ಣ ಬಹದ್ದೂರ್ ಬೋಗಟಿ ಎಂಬವರ ವಿರುದ್ಧ ಮುಂಬೈ,ಪುಣಿ, ಸೂರತ್, ಮಧ್ಯಪ್ರದೇಶದ ಮಾಧವ ನಗರ, ಕೇರಳದ ತ್ರಿಶೂರ್, ಪಂಜಾಬ್ ರಾಜ್ಯಗಳಲ್ಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಬ್ಯಾಂಕ್ ದರೋಡೆ, ಜ್ಯುವೆಲ್ಲರಿ ದರೋಡೆ ಪ್ರಕರಣಗಳು ದಾಖಲಾಗಿರುತ್ತದೆ.
ಈ ಕುಖ್ಯಾತ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಪ್ರದೀಪ ಟಿ ಆರ್, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಸಾಹೇಜ್ ಗಂಜ್ ಗ್ಯಾಂಗ್ ಎಂದರೇನು ?
ಸಾಹೇಬ್ ಗಂಜ್ ಗ್ಯಾಂಗ್ ಎಂಬುವುದು ಉತ್ತರ ಭಾರತದ ಜಾರ್ಖಂಡ್ ರಾಜ್ಯದ ಕುಖ್ಯಾತ ದರೋಡೆ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್ ನಲ್ಲಿನಲ್ಲಿ ನೇಪಾಳ ದೇಶದ ಪ್ರಜೆಗಳು ಕೂಡಾ ಇದ್ದು, ಇವರು ಪ್ರಮುಖವಾಗಿ ದೊಡ್ಡ ದೊಡ್ಡ ನಗರಗಳಲ್ಲಿನ ಬ್ಯಾಂಕ್, ಜ್ಯುವೆಲ್ಲರಿ ಅಂಗಡಿಗಳನ್ನು ಗುರುತಿಸಿ ಅಲ್ಲಿಯ ಪರಿಸರದಲ್ಲಿ ಬಾಡಿಗೆಗೆ ಮನೆ/ಲಾಡ್ಜ್ ಗಳನ್ನು ಮಾಡಿಕೊಂಡು ಸ್ಥಳೀಯವಾಗಿ ದರೋಡೆ ಮಾಡಲು ಬೇಕಾದ ಸಲಕರಣೆಗಳನ್ನು ಖರೀದಿಸಿಕೊಂಡು ನಂತರ ಜ್ಯುವೆಲ್ಲರಿ ಅಂಗಡಿ, ಬ್ಯಾಂಕ್ ಗಳ ಗೋಡೆ ಕನ್ನ ಕೊರೆದು, ಗ್ಲಾಸ್ ಕಟ್ಟರ್ ಮೂಲಕ ತಿಜೋರಿಯನ್ನು ಒಡೆದು ಕೋಟ್ಯಾಂತರ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡುವ ಕುಖ್ಯಾತ ಗ್ಯಾಂಗ್ ಆಗಿದ್ದು, ಈ ಗ್ಯಾಂಗ್ ನಲ್ಲಿದ್ದವರು ದೇಶದ ವಿವಿಧಡೆಗಳಲ್ಲಿ ಈ ಹಿಂದೆ ನಡೆದ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾರೆ. ಈ ಗ್ಯಾಂಗ್ ನಲ್ಲಿ ನೇಪಾಳ ದೇಶದ ಹಲವಾರು ಮಂದಿ ಆರೋಪಿಗಳಿದ್ದು, ಇವರು ಕೃತ್ಯ ನಡೆಸಿದ ನಂತರ ಸೊತ್ತಿನೊಂದಿಗೆ ನೇಪಾಳಕ್ಕೆ ಪರಾರಿಯಾಗುತ್ತಿದ್ದರು.
Mangalore ccb police arrested notorious sahib ganj gangsters, which 9 accused person where sketched robbery of jewellery in ullal Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am