ಬ್ರೇಕಿಂಗ್ ನ್ಯೂಸ್
04-12-22 02:25 pm HK News Desk ಕ್ರೈಂ
ಚೆನ್ನೈ, ಡಿ.4 : ಕೋವಿಡ್-19 ಸಮಯದಲ್ಲಿ ಉದ್ಯೋಗ ಕಳಕೊಂಡು ಸೌದಿ ಅರೇಬಿಯಾದಿಂದ ಹಿಂದಿರುಗಿದ್ದ ತಮಿಳುನಾಡಿನ ತಿರುಚ್ಚಿ ಮೂಲದ ವ್ಯಕ್ತಿಯೊಬ್ಬರು ಆನ್ಲೈನ್ ವಂಚನೆಗೆ ಬಲಿಯಾಗಿದ್ದು, 23.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ತಿರುಚ್ಚಿ ಜಿಲ್ಲೆಯ ಮುಸ್ರಿ ತಾಲೂಕಿನ ತಿರುಮುರುಗನ್ ನಗರದ ಪ್ರೇಮ್ ನವಾಸ್ ಸೌದಿ ಅರೇಬಿಯಾದಲ್ಲಿ ಶಿಕ್ಷಕ ಹುದ್ದೆಯಲ್ಲಿದ್ದರು. ಉದ್ಯೋಗ ಕಳೆದುಕೊಂಡು ಊರಿಗೆ ಮರಳಿದ ಬಳಿಕ ಆನ್ಲೈನ್ ಪೋರ್ಟಲ್ ಮೂಲಕ ಹೊಸ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಪರಿಚಯವಾಗದ್ದ ವ್ಯಕ್ತಿ ಸಿಂಗಾಪುರದ ನ್ಯಾಷನಲ್ ಯುನಿವರ್ಸಿಟಿಯಲ್ಲಿ ಪ್ರೊಫೆಸರ್ ಹುದ್ದೆಗೆ ಮಾಸಿಕ 6 ಲಕ್ಷ ರೂ. ವೇತನ ದೊರಕಿಸುವುದಾಗಿ ಭರವಸೆ ನೀಡಿ ಅವರನ್ನು ಸಂಪರ್ಕಿಸಿದ್ದ.
ತನ್ನೊಂದಿಗೆ ಸ್ಕೈಪ್ ಮೂಲಕ ಮಾತನಾಡಿದ್ದು ಉದ್ಯೋಗ ತೆಗೆಸಿಕೊಡಲು ಹಣ ಕೊಡಬೇಕಾಗುತ್ತದೆ ಎಂದಿದ್ದಾಗಿ ಪ್ರೇಮ್ ನವಾಸ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಕಂಪ್ಯೂಟರ್ ಸೈನ್ಸ್ ನಲ್ಲಿ ಪಿಎಚ್ ಡಿ ಪದವಿ ಪಡೆದಿರುವ ಪ್ರೇಮ್ ನವಾಸ್ ಅವರನ್ನು ಬಲೆಗೆ ಬೀಳಿಸಿದ ವಂಚಕ, 23 ಲಕ್ಷ ರೂ. ಹಣವನ್ನು ಮೂರು ಕಂತುಗಳಲ್ಲಿ ಪಡೆದಿದ್ದ. ನೋಂದಣಿ ಶುಲ್ಕ, ಪ್ರಮಾಣಪತ್ರಗಳ ಪರಿಶೀಲನೆ ಮತ್ತು ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದಿಂದ ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ (ಎನ್ಒಸಿ) ಎಂದು ಹೇಳಿ ಹಣವನ್ನು ತೆಗೆದುಕೊಂಡಿದ್ದಾನೆ. ವಂಚಕ ಮೂರು ವಿಭಿನ್ನ ಫೋನ್ ಸಂಖ್ಯೆಗಳು ಮತ್ತು ಸ್ಕೈಪ್ ಐಡಿಗಳು ಮತ್ತು ಎರಡು ಇಮೇಲ್ ಐಡಿಗಳ ಮೂಲಕ ತನ್ನನ್ನು ಸಂಪರ್ಕಿಸಿದ್ದ ಎಂದು ನವಾಸ್ ದೂರಿನಲ್ಲಿ ತಿಳಿಸಿದ್ದಾರೆ.
Tiruchy police told IANS that Prem Navas of Tirumurugan Nagar, Musri Taluk of Tiruchy district after losing his teaching job in Saudi Arabia was searching for new job openings abroad through online job sites. In his complaint lodged with the police, Prem Navas said that a person approached him promising a job at National University Singapore as a professor with a monthly salary of Rs 6 lakh. He was lured into the deal and the scamster even spoke to him through Skype.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am