ಬ್ರೇಕಿಂಗ್ ನ್ಯೂಸ್
12-12-22 10:44 pm HK News Desk ಕ್ರೈಂ
ಶಿವಮೊಗ್ಗ, ಡಿ.12 : ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಎನ್ನೋದು ಇದಕ್ಕೇ ಇರಬೇಕು. ಆಸ್ತಿ ಪಾಲು ಕೊಡದ ಸಿಟ್ಟಿನಲ್ಲಿ ಅಪ್ಪನನ್ನು ಮಕ್ಕಳೇ ಸುಪಾರಿ ನೀಡಿ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಘಟನೆ ನಡೆದಿದ್ದು, ಕೆಎಸ್ಆರ್ ಪಿ ನಿವೃತ್ತ ಎಆರ್ ಎಸ್ಐ ನಾಗೇಂದ್ರಪ್ಪ ಕೊಲೆಯಾದ ವ್ಯಕ್ತಿ. ಕಳೆದ ನವೆಂಬರ್ 29 ರಂದು ಶಿರಾಳಕೊಪ್ಪದಲ್ಲಿ ಚರಂಡಿಯಲ್ಲಿ ಅನಾಥ ಶವ ಸಿಕ್ಕಿತ್ತು. ಕೆಎಸ್ಆರ್ಪಿಯ ನಿವೃತ್ತ ಎಆರ್ ಎಸ್ಐ, ಶಿವಮೊಗ್ಗದ ಶಿರಾಳಕೊಪ್ಪದ ಭೋಗಿ ಗ್ರಾಮದ ನಾಗೇಂದ್ರಪ್ಪ ಅವರ ಶವವೆಂದು ಗುರುತಿಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಶಿರಾಳಕೊಪ್ಪ ಠಾಣೆ ಪೊಲೀಸರು ಇದರ ಹಿಂದಿನ ರಹಸ್ಯವನ್ನು ಬಯಲಿಗೆಳೆದಿದ್ದಾರೆ.
ನಾಗೇಂದ್ರಪ್ಪ ಅವರು ಭದ್ರಾವತಿ ಕೋರ್ಟ್ ಗೆ ಹೋಗಿ, ವಾಪಸ್ ಶಿಕಾರಿಪುರಕ್ಕೆ ಬರುತ್ತಿದ್ದ ವೇಳೆ ಆರೋಪಿಗಳು ಅವರನ್ನು ತಮ್ಮ ಆಟೋದಲ್ಲಿ ಹತ್ತಿಸಿಕೊಂಡಿದ್ದರು. ಪುಣೇದಹಳ್ಳಿ ಗ್ರಾಮದ ಬಳಿ ಕರೆದೊಯ್ದು, ಬಲವಂತದಿಂದ ನಶೆ ಬರುವ ಔಷಧಿ ಕುಡಿಸಿದ್ದಾರೆ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಅದೇ ಆಟೋದಲ್ಲಿ ಶವ ಸಾಗಾಟ ಮಾಡಿದ್ದಾರೆ. ಬಳಿಕ ಆರೋಪಿಗಳು ಉಡುಗಣಿ ಗ್ರಾಮದಿಂದ ಕುಸ್ಕೂರು ಗ್ರಾಮಕ್ಕೆ ಹೋಗುವ ಮಣ್ಣಿನ ರಸ್ತೆಯ ಪಕ್ಕದಲ್ಲಿ ಚರಂಡಿಗೆ ಶವ ಎಸೆದಿದ್ದಾರೆ.
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿರುವ ಪೊಲೀಸರು ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಿದ್ದಾರೆ. ಮಂಜುನಾಥ್, ಉಮೇಶ್, ರಿಜ್ವಾನ್, ಹಬೀಬ್ ಉಲ್ಲಾ ಹಾಗೂ ಸುಹೇಲ್ ಬಾಷಾ ಪೊಲೀಸರ ಅತಿಥಿಯಾಗಿದ್ದು ಸುಪಾರಿ ಪಡೆದು ಕೊಲ್ಲಿಸಿದ್ದಾಗಿ ತಪ್ಪೊಪ್ಪಿಗೆ ನೀಡಿದ್ದಾರೆ.
ನವೆಂಬರ್ 9 ರಂದು ಮೊದಲ ಬಾರಿಗೆ ನಾಗೇಂದ್ರಪ್ಪ ಕೊಲೆ ಯತ್ನ ನಡೆದಿತ್ತು. ಗೂಡ್ಸ್ ಆಟೋದಲ್ಲಿ ನಾಗೇಂದ್ರಪ್ಪ ಸಾಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಸಲಾಗಿತ್ತು. ಈ ವೇಳೆ ನಾಗೇಂದ್ರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಘಟನೆ ಬಗ್ಗೆ ದೂರು ದಾಖಲಾಗಿರಲಿಲ್ಲ. ಈ ಬಾರಿ ಉಪಾಯದಿಂದಲೇ ಕರೆದೊಯ್ದು ಸಾಯಿಸಿದ್ದಾರೆ.
A police head constable and his brother allegedly hired ‘supari’ (contract) killers to murder their father, a retired police official, over a property dispute, at Bhogi in Shikaripur taluk of Shivamogga district in Karnataka. Shikaripur police solved the murder of Nagendrappa, 68, which was reported on November 29. They arrested five persons, including the victim’s sons Manjunath, 42, a driver at Shiralakoppa, and Umesh, 40, a police head constable with KSRP 4 th Battallion in Bengaluru.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am