ಬ್ರೇಕಿಂಗ್ ನ್ಯೂಸ್
14-12-22 12:42 pm Bangalore Correspondent ಕ್ರೈಂ
ಬೆಂಗಳೂರು, ಡಿ.14: ಕನ್ನಡದ ಹಿರಿಯ ನಟಿ ಅಭಿನಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಭಿನಯಾ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಲಾಗಿದೆ.
ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ವರದಕ್ಷಿಣೆ ಕಿರುಕುಳದ ಬಗ್ಗೆ ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಜಯಮ್ಮಗೆ 5 ವರ್ಷ ಶಿಕ್ಷೆ ಹಾಗೂ ಅಭಿನಯಾ ಸಹೋದರ ಚೆಲುವರಾಜ್ಗೆ 2 ವರ್ಷ ಶಿಕ್ಷೆ ನೀಡಲಾಗಿದೆ.
ಬಣ್ಣದ ಲೋಕದಲ್ಲಿ ಅಭಿನಯಾ ಅವರು ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಚೊಚ್ಚಲ ಸಿನಿಮಾ ‘ಅನುಭವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. 1998ರಲ್ಲಿ ಅಭಿನಯಾ ಸಹೋದರ ಶ್ರೀನಿವಾಸ್ ಜೊತೆ ಲಕ್ಷ್ಮಿದೇವಿ ವಿವಾಹ ನಡೆದಿತ್ತು. ಮದುವೆ ಬಳಿಕ ಶ್ರೀನಿವಾಸ್ ಕುಟುಂಬದವರು ವರದಕ್ಷಿಣಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಂದ್ರಾ ಲೇಔಟ್ನಲ್ಲಿ ದೂರು ದಾಖಲಾಗಿತ್ತು. ಅಭಿನಯಾ ತಾಯಿ ಜಯಮ್ಮ, ಅಭಿನಯಾ ಮತ್ತು ಗಂಡ ಶ್ರೀನಿವಾಸ್ ವಿರುದ್ಧ 2002ರಲ್ಲಿ ಕೇಸು ದಾಖಲಿಸಲಾಗಿತ್ತು. ಹೆರಿಗೆ ಬಳಿಕ ಪತಿ ಮನೆಯವರು ನನ್ನನ್ನು ಸೇರಿಸಿಕೊಳ್ಳಲಿಲ್ಲ. ಪೋಷಕರ ಮನೆಯಲ್ಲಿ ಉಳಿದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹೇರಿದರು. ಕೊಲೆ ಬೆದರಿಕೆಯನ್ನೂ ಹಾಕಿದರು ಎಂದು ದೂರಿನಲ್ಲಿ ಲಕ್ಷ್ಮಿದೇವಿ ತಿಳಿಸಿದ್ದರು. ಪ್ರಕರಣದಲ್ಲಿ ಕೆಳ ನ್ಯಾಯಾಲಯದಲ್ಲಿ ಪ್ರಕರಣದ ಬಗ್ಗೆ ತೀರ್ಪು ಆಗಿತ್ತು. ಆನಂತರ, ಹೈಕೋರ್ಟಿಗೆ ಮೇಲ್ಮನವಿ ಆಗಿ ಈಗ ಏಕಸದಸ್ಯ ಪೀಠ ತೀರ್ಪು ನೀಡಿದ್ದು ಅಭಿನಯಾ, ಅವರ ತಾಯಿ ಮತ್ತು ಸಹೋದರನಿಗೆ ಜೈಲು ಶಿಕ್ಷೆ ವಿಧಿಸಿದೆ.
Kannada actress Abhinaya (Abhinaya) has been sentenced to 2 years in jail by the High Court for domestic violence and harassing sister-in-law Lakshmidevi’s dowry. A single member bench of the High Court has ordered that Abhinaya’s mother Jayamma be sentenced to 5 years in jail.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am