ಬ್ರೇಕಿಂಗ್ ನ್ಯೂಸ್
16-12-22 10:48 pm HK News Desk ಕ್ರೈಂ
ತಮಿಳುನಾಡು, ಡಿ 16: ಮದುವೆಗೂ ಮುನ್ನವೇ ಮಗುವಿಗೆ ಜನ್ಮ ನೀಡಿದ್ದ 19 ವರ್ಷದ ಯುವತಿಗೆ ಪೋಷಕರೇ ವಿಷವಿಟ್ಟು ಕೊಲೆ ಮಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ಬೆಳಕಿಗೆ ಬಂದಿದೆ.
ಯುವತಿಯ ತಂದೆ ಮತ್ತು ಆಕೆಯ ಚಿಕ್ಕಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 5ರಂದು ಕಾಲುವೆಯ ಪೊದೆಯೊಂದರ ಬಳಿ ಶಿಶು ಪತ್ತೆಯಾಗಿತ್ತು. ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಶಿಶುವನ್ನು ರಕ್ಷಿಸಿ ಚಿಕಿತ್ಸೆಗಾಗಿ ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಶಿಶುವಿನ ಪೋಷಕರಿಗಾಗಿ ಪೊಲೀಸರು ತನಿಖೆ ಆರಂಭಿಸಿದ್ದರು. ಇದರ ನಡುವೆ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ ಇದೇ ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಅಂತೆಯೇ, ಯುವತಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಆದರೆ, ಚಿಕಿತ್ಸೆ ನೀಡುತ್ತಿರುವಾಗಲೇ ಆಕೆಯ ಸ್ಥಿತಿ ಹದಗೆಟ್ಟಿದ್ದು, ಪೊಲೀಸರ ಹೇಳಿಕೆ ದಾಖಲಿಸಿಕೊಂಡು ಸ್ವಲ್ಪ ಹೊತ್ತಿನಲ್ಲಿ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾಳೆ. ಇತ್ತ, ಯುವತಿಯ ಹೇಳಿಕೆ ಹಾಗೂ ತಮಗೆ ಸಿಕ್ಕ ಇತರ ಮಾಹಿತಿ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಾಗ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಇದರಿಂದ ತನಿಖೆ ಚುರುಕುಗೊಳಿಸಿದಾಗ ಕಾಲುವೆಯ ಬಳಿ ಪತ್ತೆಯಾದ ನವಜಾತ ಶಿಶು ಈ ಯುವತಿಯದ್ದೇ ಎಂದು ಬಯಲಾಗಿದೆ. ಅಲ್ಲದೇ, ಅವಿವಾಹಿತ ಯುವತಿಯಾಗಿದ್ದ ಕಾರಣ ಕುಟುಂಬದ ಬಗ್ಗೆಯೂ ಪೊಲೀಸರು ಅವಮಾನ ವ್ಯಕ್ತಪಡಿಸಿದ್ದಾರೆ. ಪೋಷಕರು ಏನೋ ಮರೆಮಾಚುತ್ತಿದ್ದಾರೆ ಎಂಬ ಸಂಶಯ ಪೊಲೀಸರಿಗೆ ಕಾಡಿದೆ.
ಹೀಗಾಗಿ ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಮದುವೆಗೂ ಮುನ್ನವೇ ಯುವತಿ ಮಗುವಿಗೆ ಜನ್ಮ ನೀಡಿದ್ದರಿಂದ ಆ ಮಗು ಸಾಕಲು ಮನಸ್ಸಿಲ್ಲದ ಪೊದೆಯೊಂದರ ಬಳಿ ಎಸೆದಿದ್ದರು. ಆದರೆ, ಮಗುವಿನ ಬಗ್ಗೆ ತನಿಖೆ ಚುರುಕಾದ ವಿಷಯ ತಿಳಿದು ಯುವತಿಗೆ ಕುಟುಂಬಸ್ಥರು ವಿಷವುಣಿಸಿದ್ದರು. ಹೀಗಾಗಿಯೇ ಯುವತಿ ವಿಷಮ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ, ಇದನ್ನೂ ಆತ್ಮಹತ್ಯೆ ಯತ್ನ ಎಂಬ ಕಥೆ ಕಟ್ಟಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಯುವತಿ ಸಾವನ್ನು ಕೊಲೆ ಎಂದು ಪರಿಗಣಿಸಿರುವ ಪೊಲೀಸರು, ತಂದೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. ಜೊತೆಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
A shocking incident has come to light in Tiruchi, Tamil Nadu, where a 19-year-old girl who gave birth to a child before marriage was poisoned to death by her parents. The police have arrested the girl's father and her aunt. On December 5, the baby was found near a bush by the canal. Acting on the information given by the public, the police visited the place and rescued the infant who was struggling between life and death and admitted him to the government hospital in Trichy for treatment.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am