ಬ್ರೇಕಿಂಗ್ ನ್ಯೂಸ್
17-10-20 09:19 pm Dilip: Bengaluru Correspondent ಕ್ರೈಂ
ಬೆಂಗಳೂರು, ಅಕ್ಟೋಬರ್ 17: ಮನೀಶ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದು ಈ ವೇಳೆ ಇಬ್ಬರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಬಂಧಿತರನ್ನು ಶಶಿಕಿರಣ್ ಅಲಿಯಾಸ್ ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32) ಎಂದು ಗುರುತಿಸಲಾಗಿದೆ. ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು ಪ್ರತಿಯಾಗಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಆರೋಪಿಗಳನ್ನು ವಶಕ್ಕೆ ಪಡೆದ ಬಳಿಕ, ಪೊಲೀಸರು ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಬಳಸಿದ್ದ ಮಾರಕಾಸ್ತ್ರಗಳನ್ನ ಜಪ್ತಿ ಮಾಡಲು ಮುಂದಾಗಿದ್ದರು. ಇದಕ್ಕಾಗಿ, ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡಿದ್ದರು. ಆದರೆ, ಆರೋಪಿಗಳು ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ಪರಾರಿಯಾಗಲು ನೋಡಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಫೈರಿಂಗ್ ನಿಂದ ಗಾಯಗೊಂಡಿರುವ ಅಕ್ಷಯ್ ಹಾಗೂ ಶಶಿಕಿರಣ್ ಎಂಬಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಧಿತರ ಪೈಕಿ ಶಶಿಕಿರಣ್ ಮತ್ತು ನಿತ್ಯ ಕೊಡಗು ಮೂಲದವರು ಎನ್ನಲಾಗುತ್ತಿದ್ದು, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರು ಎನ್ನುವ ಮಾಹಿತಿ ಸಿಕ್ಕಿದೆ.
ಬೆಂಗಳೂರಿನ ಬ್ರಿಗೇಟ್ ರಸ್ತೆಯಲ್ಲಿರುವ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಗುರುವಾರ ರಾತ್ರಿ ಹತ್ಯೆ ಮಾಡಲಾಗಿತ್ತು. ದರೋಡೆ, ಕೊಲೆ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದ ಮನೀಶ್ ವಿರುದ್ಧ ರೌಡಿ ಶೀಟ್ ಓಪನ್ ಮಾಡಲಾಗಿತ್ತು. ಇತ್ತೀಚೆಗೆ ಪಕ್ಕದ ಇನ್ನೊಂದು ಬಾರ್ ಮಾಲೀಕನ ಜೊತೆ ಗಲಾಟೆ ಮಾಡಿಕೊಂಡಿದ್ದ ಮನೀಶ್ ನನ್ನು ಸುಪಾರಿ ಕೊಟ್ಟು ಕೊಲ್ಲಿಸಲಾಗಿದೆ ಎನ್ನುವ ಮಾಹಿತಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
In connection to the shootout and murder of Bangalore bar owner Manish Shetty, the Bangalore police have succeeding in arresting 4 accused. It is stated two of the accused attacked on the police in which police firing has taken place.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm