ಬ್ರೇಕಿಂಗ್ ನ್ಯೂಸ್
04-08-20 03:37 pm Headline Karnataka News Network ಕ್ರೈಂ
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ವಿರುದ್ಧ ಪಾಟ್ನಾ ಪೊಲೀಸರು 48 ಪುಟಗಳ ಸಾಕ್ಷಿ ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.
ಸುಶಾಂತ್ ನಿಧನದ ಬಳಿಕ ಅಜ್ಞಾತ ಸ್ಥಳದಲ್ಲಿರುವ ರಿಯಾ ಚಕ್ರವರ್ತಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ವಿಡಿಯೋ ಮೂಲಕ ರಿಯಾ ಚಕ್ರವರ್ತಿ ಸಂದೇಶ ರವಾನಿಸಿದ್ದರು. ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಸುಶಾಂತ್ ತಂದೆ ಕೆ.ಕೆ.ಸಿಂಗ್ ಪಾಟ್ನಾದಲ್ಲಿ ರಿಯಾ ಚಕ್ರವರ್ತಿ ಮತ್ತು ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಾಟ್ನಾ ಪೊಲೀಸರು ರಿಯಾ ಬಂಧನಕ್ಕಾಗಿ ಸಾಕ್ಷಿ ಸಂಗ್ರಹಿಸುತ್ತಿದ್ದಾರೆ.
ಈಗಾಗಲೇ ಪಾಟ್ನಾ ಪೊಲೀಸರು 48 ಪುಟಗಳಷ್ಟು ಸಾಕ್ಷಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಈ 48 ಪುಟಗಳಲ್ಲಿ ರಿಯಾ ಮತ್ತು ಸುಶಾಂತ್ ನಡುವೆ ನಡೆದ ಬ್ಯಾಂಕ್ ವ್ಯವಹಾರಗಳ ಮಾಹಿತಿ ಇದೆ. 13 ಪುಟಗಳಲ್ಲಿ ಸುಶಾಂತ್ ಮಾಜಿ ಗೆಳತಿ, ನಟಿ ಅಂಕಿತಾ ಲೋಖಂಡೆ ಜೊತೆ ವಾಟ್ಸಪ್ ಸಂದೇಶಗಳ ಸ್ಕ್ರೀನ್ ಶಾಟ್, ಆರು ಜನರ ಹೇಳಿಕೆಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯ ಟೆಲಿಫೋನ್ ಹೇಳಿಕೆ ಸಹ ಈ ಪುಟಗಳಲ್ಲಿದೆ ಎಂದು ಪ್ರಕಟವಾಗಿದೆ.
ಈ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ರಿಯಾ ಚಕ್ರವರ್ತಿಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸುವಂತೆ ಪೊಲೀಸರು ಮನವಿ ಮಾಡಿಕೊಳ್ಳಲಿದ್ದಾರೆ. ಸುಶಾಂತ್ ಹೊಂದಿದ್ದ ಮೂರು ಬ್ಯಾಂಕ್ ಖಾತೆಗಳ ಮಾಹಿತಿ, ಯುಪಿಐ ಪೇಮೆಂಟ್, ಸ್ಟೇಟ್ಮೆಂಟ್ ಮತ್ತು ಚಾರ್ಟೆಡ್ ಅಕೌಂಟೆಂಟ್ ಲೇಜರ್ ಬ್ಯಾಲೆನ್ಸ್ ಕಾಪಿಯನ್ನು ಸಹ ಪೊಲೀಸರು ತರಿಸಿಕೊಂಡಿದ್ದಾರೆ.
ಸುಶಾಂತ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಮತ್ತು ಮುಂಬೈ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm