ಬ್ರೇಕಿಂಗ್ ನ್ಯೂಸ್
21-02-23 06:40 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಪೊಲೀಸ್ ಅಧಿಕಾರಿಯೇ ರಾತ್ರಿ ವೇಳೆ ತನ್ನನ್ನು ಸೆಕ್ಸ್ಗೆ ಆಹ್ವಾನಿಸಿದ್ದರು. ಇನ್ನು ನಾವು ನಮ್ಮ ಸಮಸ್ಯೆ ಬಗ್ಗೆ ಯಾರಿಗೆ ದೂರು ಹೇಳಿಕೊಳ್ಳಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಯೊಬ್ಬ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆಯೇ ಅಳಲು ತೋಡಿಕೊಂಡ ಪ್ರಸಂಗ ಮಂಗಳವಾರ ನಡೆದಿದೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ ಮತ್ತು ಅರಿವು ಕಾರ್ಯಾಗಾರದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ ಶೋಭಾ ಬಿಜೆ ಅಹವಾಲು ಆಲಿಸಿದರು. ಗಂಟೆಗೂ ಹೆಚ್ಚು ಕಾಲ ಲಿಂಗತ್ವ ಅಲ್ಪಸಂಖ್ಯಾತರ ನೋವಿನ ದನಿಗಳನ್ನು ಆಲಿಸಿದ ನ್ಯಾಯಾಧೀಶರು, ಶೋಷಣೆಗೆ ಒಳಗಾಗುವ ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ದೂರು ಕೊಡಬೇಕು. ಟ್ರಾನ್ಸ್ ಜೆಂಡೆರ್ನವರು ಉಚಿತವಾಗಿ ನ್ಯಾಯ ಪಡೆಯಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೂ ದೂರು ನೀಡಬಹುದು ಎಂದು ಹೇಳಿದಾಗ, ಪ್ರವೀಣ್ ಹೆಸರಿನ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿ ತನಗೆ ಪೊಲೀಸ್ ಅಧಿಕಾರಿಯೇ ಲೈಂಗಿಕ ಸಂಬಂಧಕ್ಕೆ ಆಹ್ವಾನ ನೀಡಿದ್ದರು ಎಂದು ಗಮನಸೆಳೆದರು. ಈ ವೇಳೆ, ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿರಲಿಲ್ಲ. ಕಿರಿಯ ಶ್ರೇಣಿಯ ಪೊಲೀಸ್ ಪೇದೆಗಳಷ್ಟೆ ಇದ್ದರು. ಪ್ರವೀಣ್ ಈ ಮಾತು ಹೇಳುತ್ತಿದ್ದಂತೆ, ನ್ಯಾಯಾಧೀಶರು ಕೆಲ ಹೊತ್ತು ಮೂಕ ವಿಸ್ಮಿತರಾದರು.
ಬಳಿಕ ಕಾನೂನು ಸೇವಾ ಪ್ರಾಧಿಕಾರದ ಸೇವೆಗಳು ಎಲ್ಲರಿಗೂ ಉಚಿತವಾಗಿರುತ್ತದೆ. ದೂರುಗಳು ಬಂದಾಗ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲು ಅವಕಾಶವಿರುತ್ತದೆ ಎಂದು ಧೈರ್ಯ ತುಂಬಿದರು. ಮುಂದಿನ ಸಭೆಗಳಲ್ಲಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಕೂಡ ಉಪಸ್ಥಿತರಿದ್ದು, ಪರಿಣಾಮಕಾರಿ ಸಭೆ ನಡೆಸಬೇಕು. ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ ನೀಡಬೇಕು ಎಂದವರು ನಿರ್ದೇಶನ ನೀಡಿದರು.
ಇದೇ ವೇಳೆ, ಹನಿ ಎಂಬ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿ ತಮಗೆ ಯಾವುದರೂ ಪೊಲೀಸ್ ಠಾಣೆ, ಕಚೇರಿ ಎಲ್ಲಿಯಾದರೂ ಕಸ ಗುಡಿಸುವ ಕೆಲವನ್ನಾದರೂ ಕೊಡಿಸಿ. ಈ ಹಾಳು ದಂಧೆಯನ್ನು ನಡೆಸೋಕೆ ನಮಗೂ ಮನಸ್ಸಿಲ್ಲ. ನೆಮ್ಮದಿಯಿಂದ ನಮ್ಮ ಪಾಡಿಗೆ ಇರುತ್ತೇವೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಉದ್ಯೋಗದಲ್ಲಿ ಮೀಸಲಾತಿ ಇಟ್ಟಿದ್ದೀರಿ. ಆದರೆ ನಮ್ಮವರಿಗೆ ಇಲ್ಲಿಯ ತನಕ ಎಷ್ಟು ಮಂದಿಗೆ ಉದ್ಯೋಗ ಕೊಟ್ಟಿದ್ದೀರಿ ಎಂದು ನ್ಯಾಯಾಧೀಶರ ಬಳಿ ಪ್ರಶ್ನೆ ಮಾಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪ್ರಥ್ವಿರಾಜ್ ರೈ ಅಧ್ಯಕ್ಷತೆ ವಹಿಸಿದ್ದರು.
Mangalore Police personnel call me to have sex, transgender complains, shares pain to Judge during a meeting held at Dakshin Kannada Zilla Panchayat hall.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm