ಬ್ರೇಕಿಂಗ್ ನ್ಯೂಸ್
25-02-23 01:21 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಮಹಿಳೆಯ ಧ್ವನಿಯನ್ನು ಅನುಕರಿಸಿ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮೂಲಕ ಹಣ ಪೀಕಿಸಿದ ಘಟನೆ ನಡೆದಿದ್ದು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೂಡುಬಿದಿರೆ ಸಮೀಪದ ಬಿರಾವು ನಿವಾಸಿ ಧನಂಜಯ ಎಂದು ಗುರುತಿಸಲಾಗಿದೆ.
ಬೈಕಂಪಾಡಿ ಕೈಗಾರಿಕಾ ಸಂಕೀರ್ಣದಲ್ಲಿ ಕಂಪೆನಿಯೊಂದರ ಉದ್ಯೋಗಿಯಾಗಿರುವ ಹೊಸಬೆಟ್ಟು ನಿವಾಸಿ ನವೀನ್ಚಂದ್ರ ಎಂಬವರಿಗೆ “ಉಷಾ’ ಎನ್ನುವ ಹೆಸರಿನಲ್ಲಿ ಪರಿಚಯ ಹೇಳಿಕೊಂಡು ಹೆಣ್ಣಿನ ಸ್ವರದಲ್ಲಿ ಕರೆ ಮಾಡಿದ್ದ. ಅಲ್ಲದೆ, ಬೇರೆ ಯಾರದ್ದೋ ಹುಡುಗಿಯ ಖಾಸಗಿ ಅಂಗದ ಫೋಟೊ ಕಳಿಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದ.
25 ಸಾವಿರ ಹಣ ಕೊಡಬೇಕು, ಇಲ್ಲವಾದಲ್ಲಿ ಕರೆ ಮಾಡಿದ ಫೋನ್ ರೆಕಾರ್ಡ್ ಮತ್ತು ಫೋಟೋಗಳನ್ನು ಲೀಕ್ ಮಾಡುವುದಾಗಿ ಹೇಳಿ ಬೆದರಿಸಿದ್ದ. ಇದರಿಂದ ಕಂಗಾಲಾದ ನವೀನ್ಚಂದ್ರ ಅವರು ಒಮ್ಮೆ 2 ಸಾವಿರ ರೂ. ಗೂಗಲ್ ಪೇ ಮಾಡಿದ್ದರು. ಬಳಿಕವೂ ಪದೇ ಪದೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರಿಂದ ರೋಸಿ ಹೋಗಿ ಪೊಲೀಸರಿಗೆ ದೂರು ನೀಡಿದ್ದರು.
ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಉಷಾ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯ ಬೆನ್ನತ್ತಿದಾಗ ಅಸಲಿ ವಿಚಾರ ಬಯಲಾಗಿದೆ. ಆರೋಪಿ ಧನಂಜಯ ಎಂಬ ವ್ಯಕ್ತಿಯೇ ಹೆಣ್ಣಿನ ಸ್ವರದಲ್ಲಿ ಫೋನ್ ಕಿರುಕುಳ ನೀಡಿದ್ದು ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Mangalore Man arrested for creating fake profile, blackmailing with womans voice in Surathkal.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm