ಬ್ರೇಕಿಂಗ್ ನ್ಯೂಸ್
22-10-20 06:09 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 22: ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ಮರುಳು ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಸರಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇರಾನಿ ಗ್ಯಾಂಗ್ಗೆ ಸೇರಿದ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆ ಶ್ರೀರಾಮಪುರದ ಝಾಕಿರ್ ಹುಸೈನ್ (26), ಕಂಬರ್ ರಹೀಮ್ ಮಿರ್ಜಾ (32), ಅಕ್ಷಯ್ ಸಂಜಯ್ ಗೋಸಾವಿ (22) ಹಾಗೂ ಶಾರುಖ್ ಬಂದೇನವಾಝ್ ಶೇಖ್ (24) ಎಂದು ಗುರುತಿಸಲಾಗಿದೆ.
ಹೊಸದಿಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇವರ ವಿರುದ್ಧ ಪ್ರಕರಣಗಳಿವೆ. ವಯಸ್ಸಾದ ಒಂಟಿ ಮಹಿಳೆಯರು ನಡೆದುಕೊಂಡು ಹೋಗುವಾಗ ಮಾತಿಗೆಳೆದು ನಾವು ಪೊಲೀಸರು, ಮುಂದೆ ಗಲಾಟೆ ನಡೆಯುತ್ತಿದೆ. ನಿಮ್ಮ ಚಿನ್ನಾಭರಣಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ಪಡೆದು ಬ್ಯಾಗಿನಲ್ಲಿ ಹಾಕುವಂತೆ ನಂಬಿಸಿ, ಮೋಸದಿಂದ ಎಗರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆ ವೇಳೆ ಇವರು ನಡೆಸಿದ ಕೃತ್ಯಗಳಲ್ಲಿ ಉಡುಪಿ ನಗರ-1, ಕುಂದಾಪುರ-1, ವಿಜಯಪುರ-4, ಚಿಕ್ಕಮಗಳೂರು-1, ಬಂಟ್ವಾಳ-1 ಹಾಗೂ ಮಂಗಳೂರು ಉರ್ವಾದಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ನಾಲ್ವರು ಆರೋಪಿಗಳನ್ನು ಬಂಧಿಸುವ ವೇಳೆ ಮಂಗಳೂರಿನ ಪ್ರಕರಣದ 12 ಗ್ರಾಂ ತೂಕದ ಚಿನ್ನದ ಚೈನ್ ಸಿಕ್ಕಿದ್ದು ಅವರಿಂದ ಕೃತ್ಯಕ್ಕೆ ಬಳಸಿದ ಕಾರು, ಹೊಂಡಾ ಶೈನ್ ಬೈಕ್, ಎರಡು ಹೆಲ್ಮೆಟ್ ಹಾಗೂ ನಗದು 5,100 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಎನ್ ಅವರ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ.ಆರ್. ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ನಗರ ವೃತ್ತದ ಸಿಪಿಐ ಮಂಜುನಾಥ, ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜುನಾಥ ಡಿ.ಆರ್. ಹಾಗೂ ಸಿಬ್ಬಂದಿಗಳು ನಡೆಸಿದ್ದರು.
Udupi Police have arrested four members belonging to the infamous Irani gang from the city. The arrested are identified as Zakhir Hussain (26), Kambar Rahim Mirza (32), Akshay Sanjaya Gosavi (22), and Shaharuk Bande Nawaz Sheikh (24).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm