ಬ್ರೇಕಿಂಗ್ ನ್ಯೂಸ್
06-03-23 09:24 pm Mangalore Correspondent ಕ್ರೈಂ
ಮಂಗಳೂರು, ಮಾ.6: ಬಜ್ಪೆ ಪೊಲೀಸರು ಅಡ್ಡೂರು ಚೆಕ್ ಪೋಸ್ಟ್ ಬಳಿ ಇಬ್ಬರು ದನ ಕಳ್ಳರನ್ನು ಬಂಧಿಸಿದ್ದಾರೆ. ಗಂಜಿಮಠ ನಿವಾಸಿ ಇರ್ಷಾದ್ ಮುಂಡೇವು ಮತ್ತು ಮಂಜೇಶ್ವರ ನಿವಾಸಿ ಇರ್ಫಾನ್ ಬಂಧಿತರು.
ಬಜ್ಪೆ ಪೊಲೀಸರು ಸೋಮವಾರ ನಸುಕಿನಲ್ಲಿ ಗಸ್ತು ನಡೆಸುತ್ತಿದ್ದಾಗ ಮಹೇಂದ್ರ ಝೈಲೋ ಕಾರನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ, ಇನ್ನೊಬ್ಬಾತ ಪರಾರಿಯಾಗಿದ್ದಾನೆ. ಇಬ್ಬರನ್ನು ತೀವ್ರ ವಿಚಾರಣೆ ನಡೆಸಿದಾಗ ದನ ಕಳವು ವಿಚಾರ ಒಪ್ಪಿಕೊಂಡಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ದನ ಕಳವು ಕೃತ್ಯಗಳಲ್ಲಿ ತೊಡಗಿಸಿದ್ದರು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಹಾಗೂ 2021ರಲ್ಲಿ ಬಡಗ ಎಡಪದವು ಬಳಿ ಎರಡು ದನಗಳನ್ನು ಕೆಂಪು ಬಣ್ಣದ ಜೈಲೋ ಕಾರಿನಲ್ಲಿ ಕಳವು ಮಾಡಿರುವುದನ್ನು ಒಪ್ಪಿದ್ದಾರೆ. ತಪ್ಪಿಸಿಕೊಂಡಿರುವ ವ್ಯಕ್ತಿಯನ್ನು ಬೆಳ್ತಂಗಡಿಯ ಮದ್ದಡ್ಕ ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ಪುಂಜಾಲಕಟ್ಟೆ, ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಬಸವನಹಳ್ಳಿ ಠಾಣೆಗಳಲ್ಲಿ ದನ ಕಳವು, ದರೋಡೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
Mangalore Two arrested by Bajpe police for stealing cows near Bajpe check post.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm