ಬ್ರೇಕಿಂಗ್ ನ್ಯೂಸ್
25-10-20 12:07 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 25 : ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ಒಬ್ಬಳನ್ನು ಖಾಸಗಿ ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಯುವತಿ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿದ್ದು ಯುವಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿಯನ್ನು ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಯುವತಿ, ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸ್ತವ್ಯವಿದ್ದು 15 ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು.
ಇಂದು ಬೆಳಗ್ಗೆ ಪ್ರವೀಣ್ ಕುಂದರ್ ಎಂಬಾತ ರಕ್ಷಿತಾಳನ್ನು ಆಟೋದಲ್ಲಿ ಕರೆತಂದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಅಲ್ಲದೆ, ಯುವತಿಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಯುವಕ ನಾಪತ್ತೆಯಾಗಿದ್ದಾನೆ.
ರಕ್ಷಿತಾಳಿಗೆ ಏನಾಗಿತ್ತು , ಅನಾರೋಗ್ಯಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಆಸ್ಪತ್ರೆಯಲ್ಲಿ ಯುವತಿ ಸಾವು ಕಂಡಿದ್ದಾಳೆ. ಯುವಕನ ಪತ್ತೆಗಾಗಿ ಹಿರಿಯಡ್ಕ ಪೊಲೀಸರು ಶೋಧ ಆರಂಭಿಸಿದ್ದಾರೆ.
ರಕ್ಷಿತಾಳ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A guy from Udupi who brought a girl in a serious condition to the hospital later flees away from spot. The girl is now found dead. The deceased is identified as Rakshitha Nayak.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm