ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm