ಬ್ರೇಕಿಂಗ್ ನ್ಯೂಸ್
12-06-23 03:35 pm HK News Desk ಕ್ರೈಂ
ಲಕ್ನೋ, ಜೂನ್ 12: ಉದ್ಯಮಿಗೆ ಸೇರಿದ 1.4 ಕೋಟಿ ರೂ. ದರೋಡೆಗೈದ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಏಳು ಮಂದಿ ಪೊಲೀಸರನ್ನು ಉತ್ತರ ಪ್ರದೇಶ ಸರಕಾರ ಸೇವೆಯಿಂದಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಿದೆ.
ಔರೈಯಾ ಜಿಲ್ಲೆಯ ಭೇಲುಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಜರಾತ್ ಮೂಲದ ಉದ್ಯಮಿಯನ್ನು ಅಪಹರಿಸಿ 1.4 ಕೋಟಿ ರೂ. ದರೋಡೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆದಿದ್ದು, ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ವಜಾಗೊಂಡ ಏಳು ಪೊಲೀಸರನ್ನು ಇನ್ನೂ ಬಂಧಿಸಿಲ್ಲ. ಸೇವೆಯಿಂದ ವಜಾಗೊಂಡ ಏಳು ಪೊಲೀಸರಲ್ಲಿ ಒಬ್ಬ ಸ್ಟೇಷನ್ ಹೌಸ್ ಆಫೀಸರ್ ಮತ್ತು ಮೂವರು ಸಬ್ ಇನ್ಸ್ಪೆಕ್ಟರ್ ಹಾಗೂ ಮೂವರು ಕಾನ್ಸ್ಟೆಬಲ್ಗಳಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಾರಣಾಸಿಯ ಪೊಲೀಸ್ ಹೆಚ್ಚುವರಿ ಪೊಲೀಸ್ ಕಮಿಷನರ್, ಆರಂಭದಲ್ಲಿ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಏಳು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು. ಆದರೆ ತನಿಖೆಯ ವೇಳೆ ಪೊಲೀಸರೇ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿದ್ದರಿಂದ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿದೆ.
ದರೋಡೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
The Uttar Pradesh Police has dismissed seven policemen from police services for being allegedly involved in robbing Rs 1.40 crore from an employee of a Gujarat-based businessman in the Bhelupur area of Varanasi district on May 31.
22-05-25 09:07 pm
Bangalore Correspondent
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
Bagalkot, Monkey Visits Animal Hospital: ಬಾಗಲ...
22-05-25 12:41 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm