ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm