ಬ್ರೇಕಿಂಗ್ ನ್ಯೂಸ್
29-06-23 02:41 pm Mangalore Correspondent ಕ್ರೈಂ
ಮಂಗಳೂರು, ಜೂನ್ 29: ಯುವತಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಡಬ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಕಡಬ ಮೂಲದ ಅನೀಶ್ ರೆಹಮಾನ್(29) ಬಂಧಿತ ಆರೋಪಿ. ಇನ್ಸ್ಟಾ ಗ್ರಾಂ ಮೂಲಕ ಬಂಟ್ವಾಳದ ಯುವತಿಗೆ ಯುವಕನ ಪರಿಚಯವಾಗಿದ್ದು ಆನಂತರ ಪ್ರೀತಿಸುವ ನಾಟಕವಾಡಿದ್ದ. ಅಲ್ಲದೆ, ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿದ್ದ. ಮೇ 28ರಿಂದ ಮಂಗಳೂರಿನ ಪೂಂಜಾ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ರೂಂ ಮಾಡಿದ್ದು 20 ದಿನಗಳ ಕಾಲ ಅತ್ಯಾಚಾರ ನಡೆಸಿದ್ದಾಗಿ ಯುವತಿ ದೂರು ನೀಡಿದ್ದಾಳೆ.
24 ವರ್ಷದ ಯುವತಿಯೂ ಮುಸ್ಲಿಂ ಆಗಿದ್ದು ಬಂಟ್ವಾಳದಿಂದ ಮಂಗಳೂರಿಗೆ ಶಿಕ್ಷಣ ಪಡೆಯುವುದಕ್ಕಾಗಿ ಬಂದು ಹೋಗುತ್ತಿದ್ದಳು. ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿದ್ದಳು. ಈ ವೇಳೆ, ಯುವಕನ ಪರಿಚಯ ಆಗಿದ್ದು ಮದುವೆಯಾಗುವ ನಂಬಿಕೆಯಲ್ಲಿ ಸುತ್ತಾಟ ನಡೆಸಿದ್ದಳು. ಅನೀಶ್ ರೆಹಮಾನ್ ಬೇರೆ ಬೇರೆ ಕಡೆ ಹೊಟೇಲ್ ರೂಮ್ ಮಾಡಿ, ಬಿಲ್ ಕೊಡದೆ ಪರಾರಿಯಾಗುವ ಚಟ ಹೊಂದಿದ್ದ. ಪೂಂಜಾ ಹೊಟೇಲ್ ನಲ್ಲಿಯೂ ಅದೇ ರೀತಿ ಮಾಡಿದ್ದು ಸಿಬಂದಿ ಹಿಡಿದು ಹಾಕಿದ್ದರು. ಬಳಿಕ ಯುವತಿ ಬಳಿಯಿದ್ದ ಲ್ಯಾಪ್ಟಾಪ್ ಅನ್ನು ಹೊಟೇಲಿನಲ್ಲಿ ಅಡವಿಟ್ಟು ಹೊರಬಂದಿದ್ದ.
ಲ್ಯಾಪ್ಟಾಪ್ ಕಾಣದಾಗಿದ್ದರಿಂದ ಯುವತಿ ಬಳಿ ಮನೆಯವರು ಪ್ರಶ್ನೆ ಮಾಡಿದ್ದರು. ಆನಂತರ, ಮನೆಯವರಿಗೆ ಇವರ ವಿಷಯ ತಿಳಿದು ಅನೀಶ್ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಆತನಿಗೆ ಮದುವೆಯಾಗಿರುವ ವಿಷಯ ತಿಳಿದುಬಂದಿತ್ತು. ಬಳಿಕ ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅನೀಶ್ ವಿರುದ್ಧ ಈ ಹಿಂದೆ ಗಾಂಜಾ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದು ಕಾವೂರು ಠಾಣೆಯಲ್ಲಿ ಪ್ರಕರಣ ಎದುರಿಸುತ್ತಿದ್ದಾನೆ.
A girl was raped several times at a private lodge in Mangalore, cheated in the name of marriage, kadaba youth arrested. The arrested person has been identified as Anish Rehman (29). They both got in touch on Instagram. The girl was placed in the lodge for 20 days and was raped continuously.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm