ಬ್ರೇಕಿಂಗ್ ನ್ಯೂಸ್
08-07-23 10:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ಕೆಲಸಕ್ಕೆ ನಿಲ್ಲಿಸಿದ್ದಲ್ಲದೆ, ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್, ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ. ಅಷ್ಟರಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವಿಗೀಡಾಗಿದ್ದ. ಪೊಲೀಸರು ತೌಲಿನ್ ಹಸನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ವಿಚಾರ ಬಾಯ್ಬಿಟ್ಟಿದ್ದಾನೆ. ಸಾವಿಗೀಡಾದ ಗಟ್ಯಾನ್ ಥಗು ಎಲ್ಲಿಯವನು ಅನ್ನುವ ಸ್ಪಷ್ಟ ಮಾಹಿತಿ ಇಲ್ಲ. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
North Indian Man laborer Murdered and burnt with fire at Pandeshwar in Mangalore. The deceased has been identified as Thoulin Hussein. He was killed due to silly fight. His native is yet to be identified. Police have regustered the case.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm