ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
12-08-26 11:18 pm
HK News Staffer
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm