ಬ್ರೇಕಿಂಗ್ ನ್ಯೂಸ್
29-07-23 10:27 pm Mangalore Correspondent ಕ್ರೈಂ
ಮಂಗಳೂರು, ಜುಲೈ 29: ಅಕ್ರಮವಾಗಿ ಪಿಸ್ತೂಲ್ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್ ಒಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಂಜೇಶ್ವರದ ಮೀಯಪದವು ನಿವಾಸಿ ಅಬ್ಬಾಸ್ @ ಬೆಡಿ ಅಬ್ಬಾಸ್ (61), ಪೈವಳಿಕೆ ನಿವಾಸಿ ಯಶವಂತ್ ಕುಮಾರ್ (45) ಎಂಬವರನ್ನು ವಶಕ್ಕೆ ಪಡೆದು ಅವರಿಂದ ಪಿಸ್ತೂಲ್-1, ಮೊಬೈಲ್ ಫೋನುಗಳು-2, ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.1,45,000/- ಆಗಬಹುದು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿರುತ್ತದೆ.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ಐಗಳಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Carrying gun illegally in Mangalore, two arrested by CCB Police.
13-08-26 01:00 pm
HK News Staffer
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm