ಬ್ರೇಕಿಂಗ್ ನ್ಯೂಸ್
31-07-23 07:26 pm Mangalore Correspondent ಕ್ರೈಂ
ಮಂಗಳೂರು, ಜುಲೈ 31: ತಾನೊಬ್ಬ ಪತ್ರಕರ್ತ ಎಂದು ಹೇಳಿದರೂ, ಕೇಳದೆ ಯುವಕರಿಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕಾವೂರಿನಲ್ಲಿ ನಡೆದಿದೆ. ದೈಜಿವರ್ಲ್ಡ್ ಸುದ್ದಿ ಸಂಸ್ಥೆಯ ವರದಿಗಾರ ಅಭಿಜಿತ್ ಕೊಲ್ಪೆ ಅವರನ್ನು ನೀನು ಬ್ಯಾರಿಯೆಂದು ಹೇಳಿ ಯುವಕರು ಹಲ್ಲೆಗೆ ಯತ್ನಿಸಿದ್ದಾರೆ.
ಘಟನೆ ಬಗ್ಗೆ ಅಭಿಜಿತ್ ಕೋಲ್ಪೆ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೋಟೆಕಾರು ನಿವಾಸಿ ಚೇತನ್ (38) ಮತ್ತು ಯೆಯ್ಯಾಡಿ ನಿವಾಸಿ ನವೀನ್(39) ಬಂಧಿತರು. ನವೀನ್ ಮೂಲತಃ ಕಾಸರಗೋಡಿನ ಕುಂಬ್ಲೆ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸದ ನಿಮಿತ್ತ ಉಳಿದುಕೊಂಡಿದ್ದಾರೆ.
ಅಭಿಜಿತ್ ಜುಲೈ 26ರಂದು ಮಧ್ಯಾಹ್ನ ತನ್ನ ಸ್ನೇಹಿತೆಯ ಜೊತೆಗೆ ಕಾವೂರಿನ ಹೊಟೇಲ್ ಒಂದರಲ್ಲಿ ಊಟ ಮಾಡಿ ಹೊರ ಬರುತ್ತಿದ್ದಾಗ ಅಪರಿಚಿತ ಯುವಕರಿಬ್ಬರು ನೀನು ಬ್ಯಾರಿ, ಹಿಂದು ಹುಡುಗಿ ಜೊತೆಗೆ ಏನು ಮಾಡುತ್ತಿದ್ದೀಯಾ ಎಂದು ಹೇಳಿ ರೇಗಾಡಿದ್ದಾರೆ. ನಾನು ಬ್ಯಾರಿಯಲ್ಲ, ಹಿಂದು. ದೈಜಿ ವರ್ಲ್ಡ್ ವರದಿಗಾರ ಎಂದು ಐಡಿ ಕಾರ್ಡ್ ತೋರಿಸಿದರೂ, ಅವರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಅಭಿಜಿತ್ ಜೊತೆಗಿದ್ದ ಯುವತಿಗೂ ನಿಂದಿಸಿದ್ದಾರೆ.
ಆನಂತರ, ಕಾರು ಒಂದರಲ್ಲಿ ಆರೋಪಿಗಳು ಜಾಗ ಖಾಲಿ ಮಾಡಿದ್ದರು. ಕಾವೂರು ಪೊಲೀಸರು ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಯಾವುದೇ ಸಂಘಟನೆಯಲ್ಲಿ ಗುರುತಿಸಿಕೊಂಡಿರುವುದು ಬೆಳಕಿಗೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Moral Policing on Daijiworld Media Journalist Abhijith Kolpe at Kavoor in Mangalore. Two Hindu activists have been arrested. Journalist Abhijith Kolpe was harassed while walking to a restaurant with a companion. He was told he was a Muslim man and asked why a Hindu female was with him. He claimed that he is not a Muslim, but the two still harassed him.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm