ಬ್ರೇಕಿಂಗ್ ನ್ಯೂಸ್
14-08-23 09:38 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 14: ಕರ್ತವ್ಯದಲ್ಲಿದ್ದ ಎಎಸ್ಐ ಒಬ್ಬರಿಗೆ ಫೋನ್ ಮಾಡಿ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಮಂಗಳೂರಿನ ಕಾಂಗ್ರೆಸ್ ಮುಖಂಡ ಪುನೀತ್ ಶೆಟ್ಟಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಒಂದಕ್ಕೆ ಸಂಬಂಧಿಸಿ ಉರ್ವಾ ಠಾಣೆಯ ಎಎಸ್ಐ ವೇಣುಗೋಪಾಲ್ ಅವರಿಗೆ ಫೋನ್ ಮಾಡಿದ್ದ ಪುನೀತ್ ಶೆಟ್ಟಿ, ಆರೋಪಿಯನ್ನು ಕೂಡಲೇ ಬಂಧಿಸದಿದ್ದರೆ, ನಿಮ್ಮ ಇನ್ಸ್ ಪೆಕ್ಟರನ್ನೇ ಸಸ್ಪೆಂಡ್ ಮಾಡಿಸ್ತೀನಿ, ನಿಮ್ಮನ್ನೂ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ನಿಮ್ಮ ಕಮಿಷನರ್ ಬಗ್ಗೆಯೂ ಗೊತ್ತಿದೆ ಎಂದು ಹೇಳಿ ಏಕವಚನದಲ್ಲಿ ಬೈದಿದ್ದಾನೆ. ಈ ಬಗ್ಗೆ ಎಎಸ್ಐ ವೇಣುಗೋಪಾಲ್ ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಾದ ಬೆನ್ನಲ್ಲೇ ಆರೋಪಿ ಪುನೀತ್ ಶೆಟ್ಟಿಯನ್ನು ಇನ್ಸ್ ಪೆಕ್ಟರ್ ಭಾರತಿ ಬಂಧಿಸಿದ್ದಾರೆ.

ಶಕ್ತಿನಗರ ನಿವಾಸಿಯಾಗಿರುವ ಪುನೀತ್ ಶೆಟ್ಟಿ ಕಂಕನಾಡಿ ನಗರ ಠಾಣೆಯಲ್ಲಿ ಈ ಹಿಂದೆ ರೌಡಿಶೀಟರ್ ಆಗಿದ್ದಾನೆ. ಆರೋಪಿ ಬಳಿಯಿಂದ ಲೈಸನ್ಸ್ ಹೊಂದಿರುವ ಪಿಸ್ತೂಲು, ಆರು ಸಜೀವ ಗುಂಡು, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸು ದಾಖಲಿಸಿದ್ದು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ತಳ್ಳಲಾಗಿದೆ.
Congress leader Puneeth Shetty arrested for threatening Urwa Police ASI Veenugopal on phone. Puneeth was a former rowdy shettar, he also spoke about Commissioner Kuldeep Jain in unworthy manner.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm