ಬ್ರೇಕಿಂಗ್ ನ್ಯೂಸ್
02-09-23 11:30 am HK News Desk ಕ್ರೈಂ
ಜೈಪುರ್, ಸೆ.2: ಪತ್ನಿಗೆ ಆಕೆಯ ಪತಿ ಹಾಗೂ ಕುಟುಂಬಸ್ಥರು ಥಳಿಸಿ, ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ರಾಜಸ್ಥಾನದ ಪ್ರತಾಪ್ಗಢ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಮಹಿಳೆಯ ಪತಿ ಮಹಿಳೆಯನ್ನು ವಿವಸ್ತ್ರಗೊಳಿಸುತ್ತಿರುವುದು ಹಾಗೂ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ. ಈ ವೇಳೆ ಆಕೆ ಸಹಾಯಕ್ಕಾಗಿ ಕಿರುಚಾಡಿದ್ದಾಳೆ.
ಮಹಿಳೆ ಮನೆ ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆಯ ಪತಿ ಆಕೆಯನ್ನು ಅಪಹರಿಸಿಕೊಂಡು ಬಂದಿದ್ದ. ಬಳಿಕ ಆಕೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದೆ. ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದಾರೆ. ಅಪರಾಧ ವಿಭಾಗದ ಎಡಿಜಿ ಅವರನ್ನು ಸ್ಥಳಕ್ಕೆ ಕಳುಹಿಸಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಸುಸಂಸ್ಕೃತ ಸಮಾಜದಲ್ಲಿ ಇಂತಹವರಿಗೆ ಜಾಗವಿಲ್ಲ. ಆದಷ್ಟು ಬೇಗ ಈ ಕೃತ್ಯ ಎಸಗಿದವರನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ಆದಷ್ಟು ಬೇಗ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
Three people were held by the police after a tribal woman was allegedly beaten and paraded naked in Rajasthan's Pratapgarh district, said the police on Saturday. District Superintendent of Police (SP) Amit Kumar confirmed the information. Along with the woman's husband, two other accused were arrested.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm