ಬ್ರೇಕಿಂಗ್ ನ್ಯೂಸ್
02-09-23 08:43 pm Mangalore Correspondent ಕ್ರೈಂ
ಮಂಗಳೂರು, ಸೆ.2: "ಡ್ರಗ್ಸ್ ಫ್ರೀ ಮಂಗಳೂರು" ಎಂಬ ಗುರಿ ಇಟ್ಟುಕೊಂಡು ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಮತ್ತು ಗಾಂಜಾ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಡ್ರಗ್ಸ್ ಜಾಲದ ಪ್ರಮುಖ ಸೂತ್ರಧಾರಿ ಎನ್ನಲಾದ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ ದಂಧೆಯ ಕಿಂಗ್ ಪಿನ್ ಯಾರಿದ್ದಾರೆಂದು ಪತ್ತೆ ಮಾಡಲು ಮಂಗಳೂರು ಸಿಸಿಬಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ತನಿಖೆ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಬಂಧಿತರಾಗಿರುವ ಹೆಚ್ಚಿನ ಆರೋಪಿಗಳಿಗೆ ನೈಜಿರಿಯಾ ಮೂಲದವರಿಂದಲೇ ಡ್ರಗ್ಸ್ ಪೂರೈಕೆ ಆಗುತ್ತಿರುವುದು ತಿಳಿದುಬಂದಿತ್ತು. ನಿರಂತರ ಕಾರ್ಯಾಚರಣೆ ಬಳಿಕ ನೈಜೀರಿಯಾ ಮೂಲದ ಮಹಿಳೆಯೊಬ್ಬಳು ತನ್ನ ನಿಜ ವಿಚಾರ ಮುಚ್ಚಿಟ್ಟು ಬೆಂಗಳೂರಿನ ಯಲಹಂಕದಲ್ಲಿ ವಾಸ್ತವ್ಯ ಇರುವುದು ಪತ್ತೆಯಾಗಿತ್ತು.
ಪೊಲೀಸರು ಇದೀಗ ನೈಜೀರಿಯಾ ಮೂಲದ ಅಡೆವೊಲೆ ಅಡೆಟುಟು ಆನು @ ರೆಜಿನಾ ಜರಾ @ ಆಯಿಶಾ(33) ಎಂಬಾಕೆಯನ್ನು ಬಂಧಿಸಿದ್ದಾರೆ. ಈಕೆ ಮೂಲತಃ ನೈಜೀರಿಯಾ ದೇಶದ ಒಂಡೋ ರಾಜ್ಯದ ಅಕುರೆ ನಗರದ ನಿವಾಸಿಯಾಗಿದ್ದು ಪ್ರಸಕ್ತ ಯಲಹಂಕ ಹೋಬಳಿಯ ಜಕ್ಕೂರಿನ ಜಿಪಿ ನಾರ್ತ್ ಅವೆನ್ಯೂ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದಳು.
ಆರೋಪಿ ವಶದಿಂದ ಒಟ್ಟು 400 ಗ್ರಾಂ ತೂಕದ ರೂ. 20 ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಐಫೋನ್-1, ನಗದು ರೂ. 2910 ವಶಪಡಿಸಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ ರೂ 20,52,910 ಆಗಬಹುದೆಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಣದ ಉದ್ದೇಶದಲ್ಲಿ ಭಾರತದ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದ ಈಕೆ, ಬಳಿಕ ಇಲ್ಲಿಯೇ ಉಳಿದುಕೊಂಡಿದ್ದಳು. ಸ್ವಲ್ಪ ಸಮಯ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಆನಂತರ ನರ್ಸಿಂಗ್ ಕೆಲಸ ಬಿಟ್ಟು ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಳು. ಮಂಗಳೂರು ನಗರದ ಉಳ್ಳಾಲ, ಸೆನ್ ಪೊಲೀಸ್ ಠಾಣೆ, ಮಂಗಳೂರು ಉತ್ತರ, ಕಂಕನಾಡಿ ನಗರ, ಕೊಣಾಜೆ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈಕೆ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಗಳಲ್ಲಿ ಬಂಧಿತ ಆರೋಪಿಗಳು ಈಕೆಯಿಂದಲೇ ಮಾದಕ ವಸ್ತು ಖರೀದಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Nigeria women main Prime drug dealer in several drug cases arrested by Mangalore police in Bangalore. the arrest was made by Mangalore CCB police
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm