ಬ್ರೇಕಿಂಗ್ ನ್ಯೂಸ್
11-10-23 10:53 am HK News Desk ಕ್ರೈಂ
ಕೊಚ್ಚಿ, ಅ.11: ಹೆತ್ತ ತಾಯಿಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು, ಅತ್ಯಾಚಾರ ನಡೆಸಲು ಅನುವು ಮಾಡಿಕೊಟ್ಟಿರುವ ಹೇಯ ಕೃತ್ಯ ನಡೆದಿದೆ. ನಿರೀಕ್ಷಣಾ ಜಾಮೀನು ಕೋರಿ ಆ ತಾಯಿಯು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ''ತಾಯ್ತನಕ್ಕೆ ಅಪಮಾನ'' ಎಂದಿದೆ.
ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ದೌರ್ಜನ್ಯ ನಡೆಸಲು ಮಲತಂದೆಗೆ ಅವಕಾಶ ಮಾಡಿಕೊಟ್ಟಿರುವ ಆರೋಪವು ಆ ತಾಯಿಯ ಮೇಲಿದೆ. ಅದಕ್ಕೆ ಸಂಬಂಧಿಸಿದಂತೆ ಆಕೆಯು ನಿರೀಕ್ಷಣಾ ಜಾಮೀನು ಕೋರಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗೋಪಿನಾಥ್ ಪಿ, ''ತಾಯಿಯ ಮೇಲಿನ ಆರೋಪಗಳು ಸತ್ಯವೆಂದು ಸಾಬೀತಾದರೆ, ತಾಯ್ತನಕ್ಕೆ ಅಪಮಾನ ಮಾಡಿದಂತೆ'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಪ್ರಕರಣದಲ್ಲಿ ಹೆತ್ತ ತಾಯಿಯೂ ಆರೋಪಿಯಾಗಿರುವುದರಿಂದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಂದ ಆರೋಪಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಸಾಕ್ಷ್ಯ ಹೇಳಿಸುವ ಅಥವಾ ಪ್ರಭಾವ ಬೀರುವ ಸಾಧ್ಯತೆ ಇರುವುದನ್ನು ಕೋರ್ಟ್ ಗಮನಿಸಿದೆ. ಅದೇ ಕಾರಣದಿಂದಾಗಿ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಅರ್ಜಿದಾರರ ವಿರುದ್ಧ ಮಾಡಿರುವ ಆರೋಪಗಳು ತುಂಬಾ ಗಂಭೀರವಾದುದು, ಆ ಆರೋಪಗಳು ಸಾಬೀತಾದರೆ ತಾಯ್ತನಕ್ಕೆ ಅಪಮಾನ ಆದಂತೆ. ಅವರಿಗೆ ನಿರೀಕ್ಷಾ ಜಾಮೀನು ಕೊಡುವಂತಿಲ್ಲ. ಅರ್ಜಿದಾರ ಆರೋಪಿಯು ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯ ಹೆತ್ತ ತಾಯಿಯಾಗಿದ್ದು, ಮಗುವಿನ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಪ್ರಕರಣದಲ್ಲಿ ಎರಡನೇ ಆರೋಪಿ ಮತ್ತು ಅರ್ಜಿದಾರರ ಮಹಿಳೆಯ ಎದುರಲ್ಲಿಯೇ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆಯು ಹೇಳಿಕೆ ಕೊಟ್ಟಿದ್ದಾಳೆ. ಈ ಕಾರಣವೂ ಸಹ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡುವುದರಿಂದ ನನ್ನನ್ನು ತಡೆದಿದೆ'' ಎಂದು ನ್ಯಾಯಮೂರ್ತಿಗಳು ಉಲ್ಲೇಖಿಸಿದ್ದಾರೆ.
ಅಪ್ರಾಪ್ತ ವಯಸ್ಸಿನ ಹುಡುಗಿಯ ಮೇಲೆ ನಡೆದಿರುವ ಅತ್ಯಾಚಾರದಲ್ಲಿ ಹೆತ್ತ ತಾಯಿಯು ಎರಡನೇ ಆರೋಪಿಯಾಗಿದ್ದಾರೆ. ಮಲತಂದೆಯು ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದಾರೆ. ಪೋಕ್ಸೋ ಕಾಯ್ದೆಯ, ಐಪಿಸಿ ಸೆಕ್ಷನ್ 376(2)(n), 376 (3) ಹಾಗೂ ಮಕ್ಕಳ ಆರೈಕೆ ಮತ್ತು ರಕ್ಷಣಾ ಕಾಯ್ದೆ ಸೆಕ್ಷನ್ 75 ಅಡಿಯಲ್ಲಿ ಆರೋಪ ದಾಖಲಿಸಲಾಗಿದೆ.
2018ರ ಅಕ್ಟೋಬರ್ನಲ್ಲಿ ಮೊದಲನೆಯ ಆರೋಪಿಯು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದನು. ಅದಾದ ನಂತರ ನಿರಂತರವಾಗಿ ಹಲವು ಬಾರಿ ಕೊಪ್ಪಂನ ಬಾಡಿಗೆ ಮನೆಯಲ್ಲಿ ಅತ್ಯಾಚಾರ ಮಾಡಿದ್ದನು. ಕೊಯಮತ್ತೂರಿನ ಹೋಟೆಲ್ ಕ್ಯಾಸ್ಟಿಲೋದಲ್ಲಿ ತಾಯಿಯ ಒಪ್ಪಿಗೆ ಮೇರೆಗೆ ಆರೋಪಿಯು ಅತ್ಯಾಚಾರ ನಡೆಸಿರುವ ಆರೋಪ ಮಾಡಲಾಗಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಅಂತಿಮವಾಗಿ ಜಾಮೀನು ತಿರಸ್ಕರಿಸಿದರು.
The Kerala High Court has declined bail to a woman accused of letting step father of her minor daughter to rape her, saying if true the allegations against her are an insult to motherhood.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm