ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm