ಬ್ರೇಕಿಂಗ್ ನ್ಯೂಸ್
12-11-20 10:51 am Headline Karnataka News Network ಕ್ರೈಂ
ಭುವನೇಶ್ವರ್, ನವೆಂಬರ್ 11: ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಒಡಿಶಾದ ಬೊಲಾಂಗಿರ್ ಜಿಲ್ಲೆಯಲ್ಲಿ ನಡೆದಿದೆ.
ಬುಲು ಜಾನಿ ಅವರ ಮನೆಯ ಬಾಗಿಲು ಬಹಳ ಸಮಯದಿಂದ ಮುಚ್ಚಿರುವುದನ್ನು ಕಂಡಿದ್ದ ನೆರೆಹೊರೆಯವರಿಂದ ಈ ಘಟನೆ ಬೆಳಕಿಗೆ ಬಂದಿದೆ. ಏನೋ ನಡೆದಿದೆ ಎಂಬ ಅನುಮಾನದಿಂದ ಕಿಟಕಿಯೊಳಗಿನಿಂದ ಇಣುಕಿ ನೋಡಿದ ನೆರೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರು ಮೃತದೇಹಗಳು ಪತ್ತೆಯಾಗಿವೆ. ಬುಲು ಜಾನಿ ಮತ್ತು ಅವರ ಕುಟುಂಬದ ದೇಹಗಳು ನೆಲ ಮೇಲೆ ಬಿದ್ದಿದ್ದವು. ಅವುಗಳನ್ನು ಬ್ಲಾಂಕೆಟ್ನಲ್ಲಿ ಸುತ್ತಿಡಲಾಗಿತ್ತು.
ಅದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಪತ್ತೆಯಾಗುವ ನಿರೀಕ್ಷೆಯಿದೆ. ಕಳೆದ ಹತ್ತು ವರ್ಷಗಳಿಂದ ಬುಲು ಜಾನಿ ಮತ್ತು ಅವರ ಕುಟುಂಬ ಜೇನು ಸಂಗ್ರಹಿಸಿ ಮಾರಾಟ ಮಾಡುವ ಕೆಲಸ ಮಾಡುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಕೃತ್ಯದ ಸ್ವರೂಪ ನೋಡಿ ನಾವು ವಿಶೇಷ ತನಿಖಾ ತಂಡ ಮತ್ತು ವೈಜ್ಞಾನಿಕ ತಂಡವನ್ನು ತನಿಖೆಗಾಗಿ ರಚಿಸಿದ್ದೇವೆ. ಹೆಚ್ಚುವರಿ ಎಸ್ಪಿ ಅದನ್ನು ಮುನ್ನಡೆಸಲಿದ್ದಾರೆ. ಮೇಲ್ನೋಟಕ್ಕೆ ಹರಿತವಾದ ಆಯುಧಗಳಿಂದ ದೇಹಕ್ಕೆ ಗಾಯ ಮಾಡಿರುವುದು ಕಾಣಿಸುತ್ತಿದೆ ಎಂದು ಎಸ್ಪಿ ಸಂದೀಪ್ ಸಂಪತ್ ತಿಳಿಸಿದ್ದಾರೆ.
The bodies of six members of a family were recovered from a house at Sanrapada village in Bolangir district in western Odisha on Wednesday, with police suspecting they were murdered.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm