ಬ್ರೇಕಿಂಗ್ ನ್ಯೂಸ್
01-11-23 04:17 pm Bangalore Correspondent ಕ್ರೈಂ
ಬೆಂಗಳೂರು, ನ 01: ಮೆಡಿಕಲ್ ಸೀಟು ಆಕಾಂಕ್ಷಿಗಳಿಗೆ ಅತೀ ಕಡಿಮೆ ಮೊತ್ತದಲ್ಲಿ ನೆರೆ ರಾಜ್ಯದಲ್ಲಿ ಸೀಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಹೈದ್ರಾಬಾದ್ ಮೂಲದ ಆರೋಪಿ ಈಗ ಸಂಜಯನಗರ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಶರತ್ಗೌಡ್(45) ಬಂಧಿತ ಆರೋಪಿಯಾಗಿದ್ದು ಪೊಲೀಸರು ಸುಮಾರು 47 ಲಕ್ಷ ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಸಂಜಯನಗರದ ನ್ಯೂಬಿಇಎಲ್ ರಸ್ತೆಯಲ್ಲಿ "ನೆಕ್ಸಸ್ ಎಡು" ಎಂಬ ಸಂಸ್ಥೆ ತೆರೆದು ವಿದ್ಯಾರ್ಥಿಗಳನ್ನು ವಂಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದ.
ಆ್ಯಪ್ನಲ್ಲಿ ಅಭ್ಯರ್ಥಿಗಳ ಪಟ್ಟಿ:
ಹೈದ್ರಾಬಾದ್ ಮೂಲದ ಶರತ್ಗೌಡ ಎಂಬಿಎ ಪದವೀಧರನಾಗಿದ್ದು, ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಾನೆ. ನ್ಯೂಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಸಂಸ್ಥೆ ನಡೆಸುತ್ತಿದ್ದ. ಅದರಲ್ಲಿ ಕೆಲ ಯುವತಿಯರಿಗೆ ಉದ್ಯೋಗ ನೀಡಿದ್ದ. ಏಜೆನ್ಸಿಯೊಂದು ಸಿದ್ಧಪಡಿಸಿರುವ ಆ್ಯಪ್ನಲ್ಲಿ ರಾಜ್ಯ ಹಾಗೂ ನೆರೆರಾಜ್ಯದ ವೈದ್ಯಕೀಯ ಸೀಟು ಆಕಾಂಕ್ಷಿಗಳ ಪಟ್ಟಿ ದಾಖಲಾಗಿತ್ತು.
ಇತ್ತೀಚೆಗೆ ತಿಮ್ಮೇಗೌಡ ಎಂಬವರ ಪುತ್ರನಿಗೆ ಕೇರಳದ ಪಿ.ಕೆ.ದಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ಸೈನ್ಸ್ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದುಕೊಂಡು ವಂಚಿಸಿದ್ದ. ಈ ಸಂಬಂಧ ತಿಮ್ಮೇಗೌಡ ನೀಡಿದ ದೂರಿನ ಮೇರೆಗೆ ವಂಚನೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ತೆಲಂಗಾಣದ ಹೈದರಾಬಾದ್ನ ಆತನ ಅಪಾರ್ಟ್ಮೆಂಟ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
18 ಮಂದಿಗೆ 62 ಲಕ್ಷ ರೂ. ವಂಚನೆ:
ಆರೋಪಿ ವಿಚಾರಣೆ ವೇಳೆ ಇದುವರೆಗೂ 18 ಮಂದಿಗೆ 62 ಲಕ್ಷ ರೂ. ವಂಚಿಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಪೈಕಿ 47.80 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಬಾಕಿ ಹಣವನ್ನು ಆರೋಪಿ ಬಳಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಉತ್ತರವಿಭಾಗ ಡಿಸಿಪಿ ಸೈದುಲು ಅಡಾವತ್, ಜೆ.ಸಿ.ನಗರ ಉಪವಿಭಾಗದ ಎಸಿಪಿ ಮನೋಜ್ಕುಮಾರ್ ನೇತೃತ್ವದಲ್ಲಿ ಸಂಜಯನಗರ ಠಾಣೆ ಇನ್ಸ್ಪೆಕ್ಟರ್ ಭಾಗ್ಯವತಿ ಜೆ.ಬಂಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Man from Hyderabad arrested by Bangalore police for cheating around 60 lakhs in the name of Medical college Seat.
14-08-26 05:32 pm
HK News Staffer
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 02:07 pm
HK News Staffer
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
14-08-26 10:22 am
HK News Staffer
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm