ಬ್ರೇಕಿಂಗ್ ನ್ಯೂಸ್
01-11-23 07:48 pm Udupi Correspondent ಕ್ರೈಂ
ಉಡುಪಿ, ನ.1: ಮನೆ ಕಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಬೆಂಗಳೂರು ಮೂಲದ ಕುಖ್ಯಾತ ಕಳ್ಳನನ್ನು ಉಡುಪಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ.
ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿ. 60ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಕಲ್ಕೆರೆ ಮಂಜನ ಬಂಧನದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಹಿತಿ ನೀಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತನಾಗಿದ್ದು ಈತನಿಂದ 31,55,930 ರೂ. ಮೌಲ್ಯದ 530 ಗ್ರಾಂ ಚಿನ್ನಾಭರಣ ಹಾಗೂ 15,12,000 ರೂ. ಮೌಲ್ಯದ 16.800 ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು ಕಳವು ಮಾಡಲು ಬಳಸಿದ 2.50 ಲಕ್ಷ ರೂ. ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲದಾಸ್ ನಾಯಕ್ ಎಂಬವರ ಮನೆಗೆ ನುಗ್ಗಿದ್ದ ಕಳ್ಳರು, ಒಟ್ಟು 73,06,800 ರೂ. ಮೌಲ್ಯದ 1,882 ಗ್ರಾಂ ತೂಕದ ಚಿನ್ನಾಭರಣ ಹಾಗೂ 7450 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಳ್ಳತನ ತನಿಖೆಗಾಗಿ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಡುಪಿ ನಗರ ಠಾಣೆ ಎಸ್ಸೈ ಪುನೀತ್ ಕುಮಾರ್ ಬಿ.ಇ. ಹಾಗೂ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪೊಲೀಸರು ಅ.31ರಂದು ಕಾರ್ಯಾಚರಣೆ ನಡೆಸುತ್ತಿದ್ದಾಗ ಆರೋಪಿಯನ್ನು ಕಾರು ಸಹಿತ ಉಡುಪಿ ಉದ್ಯಾವರ ಸಮೀಪದ ಬಲಾಯಿ ಪಾದೆ ಬಳಿ ವಶಕ್ಕೆ ಪಡೆದಿದ್ದರು.
ಆರೋಪಿ ವಿರುದ್ಧ ಉಡುಪಿ, ಬ್ರಹ್ಮಾವರ, ಹಾಸನ ಜಿಲ್ಲೆಯ ತರೀಕೆರೆ, ಅರಸಿಕೇರೆ ಮತ್ತು ಬೆಂಗಳೂರಿನ ಬಾಣಾವರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 60ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ತಿಳಿಸಿದ್ದಾರೆ.
Notorious thief arrested by Udupi Police who has 60 robbery cases.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm