ಬ್ರೇಕಿಂಗ್ ನ್ಯೂಸ್
04-11-23 05:02 pm Mangalore Correspondent ಕ್ರೈಂ
ಬಂಟ್ವಾಳ, ನ.4: ಇನ್ಸ್ಟಾಗ್ರಾಮಲ್ಲಿ ಫೇಕ್ ಐಡಿ ಸೃಷ್ಟಿಸಿ ಅಪ್ರಾಪ್ತ ಬಾಲಕಿಯರಿಬ್ಬರ ಜೊತೆಗೆ ಮೋಸದಾಟದ ಮೂಲಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾಸರಗೋಡು ಮೂಲದ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವಿಟ್ಲ ಠಾಣೆ ವ್ಯಾಪ್ತಿಯಲ್ಲಿ ಪರಸ್ಪರ ಸಂಬಂಧಿಕರಾಗಿರುವ 16 ವರ್ಷ ಮತ್ತು 17 ವರ್ಷದ ಇಬ್ಬರು ಮುಸ್ಲಿಂ ಯುವತಿಯರಿಗೆ ಹುಡುಗಿ ಹೆಸರಲ್ಲೇ ಇನ್ಸ್ ಟಾ ಗ್ರಾಮಿನಲ್ಲಿ ಯುವಕನೊಬ್ಬ ಕನೆಕ್ಟ್ ಆಗಿದ್ದ. ಹುಡುಗಿ ಹೆಸರಲ್ಲಿ ಆರಂಭದಲ್ಲಿ ಸಂಪರ್ಕ ಬೆಳೆಸಿ, ಬಳಿಕ ತನ್ನ ಹೆಸರನ್ನು ಅಡ್ಡೂರಿನ ತೌಫಿಲ್ ಎಂದು ಪರಿಚಯ ಮಾಡಿಕೊಂಡಿದ್ದ. ಆನಂತರ 16 ವರ್ಷದ ಯುವತಿ ಜೊತೆಗೆ ಆತ್ಮೀಯತೆ ಬೆಳೆಸಿ ರಾತ್ರಿ ವೇಳೆ ಮನೆಯ ಪರಿಸರಕ್ಕೆ ಬಂದು ದೈಹಿಕ ಸಂಪರ್ಕ ಬೆಳೆಸಿದ್ದ.
ಇದೇ ವೇಳೆ, ಅದೇ ಪರಿಸರದ ಇನ್ನೊಬ್ಬ ಯುವತಿಗೂ ಒಬ್ಬಾತ ಇನ್ ಸ್ಟಾ ಗ್ರಾಮಿನಲ್ಲಿ ಹುಡುಗಿ ಹೆಸರಿನಲ್ಲಿ ಪರಿಚಯ ಆಗಿದ್ದು ಬಳಿಕ ತಾನು ಕಾಸರಗೋಡಿನ ರಫೀಕ್ ಎಂದು ಪರಿಚಯ ಮಾಡಿಕೊಂಡಿದ್ದ. ಕಳೆದ ಐದಾರು ತಿಂಗಳಲ್ಲಿ ಇಬ್ಬರು ಅಪ್ರಾಪ್ತ ಯುವತಿಯರ ಜೊತೆಗೂ ಈತನ ಕಾಮದಾಟ ನಡೆದಿತ್ತು. ಈ ಪೈಕಿ ಒಬ್ಬಾಕೆ ಗರ್ಭಿಣಿಯಾಗಿದ್ದರಿಂದ ಮನೆಯವರಿಗೆ ವಿಷಯ ತಿಳಿದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು. ಇಬ್ಬರು ಯುವತಿಯರೂ ಸಾಮಾನ್ಯ ಬಡ ಕುಟುಂಬದವರಾಗಿದ್ದು ಮೊಬೈಲ್ ಗೀಳು ಇವರನ್ನು ಅಡ್ಡದಾರಿ ಹಿಡಿಸಿತ್ತು.
ಆದರೆ ಆರೋಪಿ ಅಲ್ಲಿನ ವರೆಗೂ ತನ್ನ ನಿಜ ಹೆಸರನ್ನಾಗಲೀ, ತನ್ನ ಮೊಬೈಲ್ ನಂಬರನ್ನಾಗಲೀ ಯುವತಿಯರಿಗೆ ನೀಡಿರಲಿಲ್ಲ. ಇನ್ಸ್ ಟಾ ಗ್ರಾಮಿನಲ್ಲಿಯೇ ಮೆಸೇಜ್, ಕರೆ ಮಾಡುತ್ತಿದ್ದ ಯುವಕನ ಪತ್ತೆ ಪೊಲೀಸರಿಗೆ ಕಷ್ಟವಾಗಿತ್ತು. ಬಳಿಕ ಪೊಲೀಸರ ಸೂಚನೆಯಂತೆ, ಒಬ್ಬಾಕೆಯ ಮನೆಯವರ ಮೂಲಕವೇ ಟ್ರಾಪ್ ಮಾಡಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿ, ಬರಲು ತಿಳಿಸಿದ್ದು ಅದರಂತೆ ರಾತ್ರಿ ವೇಳೆ ಮನೆಗೆ ಬಂದಿದ್ದ ಯುವಕನನ್ನು ಪೊಲೀಸರೇ ಸೇರಿ ಅರೆಸ್ಟ್ ಮಾಡಿದ್ದಾರೆ.
ಕಾಸರಗೋಡು ಮೂಲದ ಆಗರ್ಭ ಶ್ರೀಮಂತ ಕುಟುಂಬದ 23 ವರ್ಷದ ಯುವಕ ಅಹಮದ್ ರಫೀಕ್ ಎಂಬಾತ ಈ ರೀತಿ ವಂಚನೆ ಎಸಗಿದವನಾಗಿದ್ದು ಆರೋಪಿ ಇನ್ಸ್ ಟಾ ಗ್ರಾಮಿನಲ್ಲಿ ಮೂರು ಫೇಕ್ ಐಡಿ ಸೃಷ್ಟಿಸಿರುವುದು ತನಿಖೆಯಲ್ಲಿ ಬಯಲಾಗಿದೆ. ತಡರಾತ್ರಿಯಲ್ಲಿ ಬರುತ್ತಿದ್ದ ಆರೋಪಿ, ಯುವತಿಯರ ಜೊತೆಗೆ ಹಲವಾರು ಬಾರಿ ದೈಹಿಕ ಸಂಪರ್ಕ ಬೆಳೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ದೂರು ದಾಖಲಾಗಿದೆ.
ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಪ್ರಾಪ್ತ ಯುವತಿಯರಿಗೆ ದೌರ್ಜನ್ಯ ಎಸಗಿದ್ದರಿಂದ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ, ಚೈಲ್ಡ್ ಕೇರ್ ಸಂಸ್ಥೆಯವರು ತನಿಖೆ ನಡೆಸುತ್ತಿದ್ದಾರೆ.
Instagram love, Minor Girl turns pregnant, 23 year old Kasaragod youth arrested by Vital Police in Mangalore. A POCSO case has been registered, and a man has been arrested for engaging in physical contact with two minor girls whom he met on Instagram. A girl from Salethur befriended a young man from Kerala on Instagram, and their relationship escalated to the point of a physical connection. Similarly, another young girl from the neighboring house also became acquainted with the same individual.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm