ಬ್ರೇಕಿಂಗ್ ನ್ಯೂಸ್
04-11-23 09:19 pm Mangalore Correspondent ಕ್ರೈಂ
ಮಂಗಳೂರು, ನ.4: ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಪ್ರಕರಣದ ಬೆನ್ನತ್ತಿದ ಪೊಲೀಸರು ಕುಖ್ಯಾತ ಸರ ಕಳ್ಳನನ್ನು ಬಂಧಿಸಿದ್ದಾರೆ.
ಅ.21ರಂದು ಘಟನೆ ನಡೆದಿದ್ದು ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಯ ಬಗ್ಗೆ ಮಂಗಳೂರು ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿ ಚಂದ್ರಶೇಖರ ಅಲಿಯಾಸ್ ಡಾರ್ಲಿಂಗ್ ಚಂದ್ರ ಎಂಬಾತನನ್ನು ಪೊಲೀಸರು ಬಂಗ್ರಕೂಳೂರು ಬಳಿಯಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿ ಸುಲಿಗೆ ಮಾಡಿದ್ದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರವನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ KA-41-EW-8959 ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 21.3 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ-1, VIVO ಕಂಪನಿಯ ಮೊಬೈಲ್ ಫೋನ್-1, HERO ಕಂಪನಿಯ ಕೀಪ್ಯಾಡ್ ಮೊಬೈಲ್ ಫೋನ್ – 1, KA-41-EW-8959 ಬಿಳಿ ಬಣ್ಣದ ಬಜಾಜ್ ಕಂಪನಿಯ ಪಲ್ಸರ್ NS 200 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದು ಇದರ ಒಟ್ಟು ಮೌಲ್ಯ 2,41,000 ರೂ. ಆಗಬಹುದು.
ಆರೋಪಿತ ಡಾರ್ಲಿಂಗ್ ಚಂದ್ರ(29) ರಾಮನಗರ ಜಿಲ್ಲೆಯ ಬಿಡದಿ ನಿವಾಸಿಯಾಗಿದ್ದು ಈ ಹಿಂದೆ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Police arrest Darling Chandra in chain snatching case in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm