ಬ್ರೇಕಿಂಗ್ ನ್ಯೂಸ್
05-11-23 01:50 pm Bangalore Correspondent ಕ್ರೈಂ
ಬೆಂಗಳೂರು, ನ.5: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಆಗಿದ್ದ ಮಹಿಳಾ ಅಧಿಕಾರಿಯೊಬ್ಬರನ್ನು ಬೆಂಗಳೂರಿನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಪ್ರತಿಮಾ (45) ಎಂಬ ಅಧಿಕಾರಿಯನ್ನು ಅವರ ಮನೆಯಲ್ಲೇ ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ.
ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಪ್ರತಿಮಾ ಅವರು ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂಗರ್ಭ ಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಗಂಡ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದರು. ರಾತ್ರಿ 8 ಗಂಟೆಗೆ ಕಚೇರಿಯಿಂದ ಸರ್ಕಾರಿ ವಾಹನದಲ್ಲಿಯೇ ಮನೆಗೆ ಬಂದಿದ್ದು ಆಬಳಿಕ ಮನೆಗೆ ನುಗ್ಗಿದ ಆಗಂತುಕರು ಕೊಲೆ ಮಾಡಿ ಹೋಗಿದ್ದಾರೆ. ಪರಿಚಿತರೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶನಿವಾರ ರಾತ್ರಿ ಪ್ರತಿಮಾ ಅವರಿಗೆ ಅಣ್ಣ ಕರೆ ಮಾಡಿದ್ದು, ಕರೆ ಸ್ವೀಕರಿಸಿರಲಿಲ್ಲ. ಬೆಳಗ್ಗೆ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿದೆ.
18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ತೀರ್ಥಹಳ್ಳಿಯ ಸತ್ಯನಾರಾಯಣ ವಿವಾಹವಾಗಿದ್ದರು. ಮದುವೆಯಾದ ಸ್ವಲ್ಪ ದಿನಗಳಲ್ಲೇ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ನೌಕರಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಎಸ್ಸೆಸ್ಸೆಲ್ಸಿ ಓದುವ ಮಗನಿದ್ದಾನೆ. ತೀರ್ಥಹಳ್ಳಿಯಲ್ಲಿ ಹೊಸ ಮನೆಯನ್ನು ಕಟ್ಟಿಸಿದ್ದು ಅಲ್ಲಿ ಎರಡು ಎಕರೆ ಅಡಿಕೆ ತೋಟವೂ ಇದ್ದುದರಿಂದ ತಂದೆ, ಮಗ ಅಲ್ಲಿಗೆ ತೆರಳಿದ್ದರು. ಇತ್ತ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಪ್ರತಿಮಾ ಒಂಟಿಯಾಗಿಯೇ ನೆಲೆಸಿದ್ದರು.
A 37-year-old geologist working under the government of Karnataka was stabbed to death at her residence in Bengaluru, the police said on Sunday. According to police, the assailants broke into the house of Pratima, who was a Deputy Director in the Mines and Geology Department of Karnataka, and fatally stabbed her.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm