ಬ್ರೇಕಿಂಗ್ ನ್ಯೂಸ್
25-11-23 04:13 pm Mangaluru Correspondent ಕ್ರೈಂ
ಮಂಗಳೂರು, ನ.25: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಅಪರೂಪದ ವನ್ಯಜೀವಿ ಉತ್ಪನ್ನ ಆಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಅನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ನ.19ರಂದು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರದ ಕುಂಟಿಕಾನ ಜಂಕ್ಷನ್ ಬಳಿಯ ಫ್ಲೈಓವರ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯಜೀವಿ ಉತ್ಪನ್ನವಾದ ಅಂಬರ್ ಗ್ರೀಸ್ ವಶದಲ್ಲಿಟ್ಟು ಮಾರಾಟಕ್ಕೆ ಯತ್ನಿಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರನ್ನು ಉಡುಪಿ ಕೋರ್ಟ್ ಬಳಿ ನಿವಾಸಿ ಜಾಕೀರ್ ಹುಸೈನ್(53), ಉಡುಪಿ ಅಲೆವೂರು ರಸ್ತೆ ನಿವಾಸಿ ಶ್ಯಾಮ್ ಪ್ರಸಾದ್(46) ಎಂದು ಗುರುತಿಸಲಾಗಿದೆ. ಆರೋಪಿಗಳ ಬಳಿಯಿದ್ದ 7.73 ಕೋಟಿ ಮೌಲ್ಯದ 7.730 ಕೆಜಿ ತೂಕದ ಅಂಬರ್ ಗ್ರೀಸ್ ಅನ್ನು ವಶಕ್ಕೆ ಪಡೆಯಲಾಗಿದೆ. ಸಾಗಾಟಕ್ಕೆ ಉಪಯೋಗಿಸಿದ ಕೆಎ-20 ಎಂಎ 5344 ಸಂಖ್ಯೆಯ ಮಾರುತಿ ಸ್ವಿಫ್ಟ್ ಕಾರು ಹಾಗೂ 2 ಮೊಬೈಲ್ ಫೋನ್ ಅನ್ನು ವಶಪಡಿಸಲಾಗಿದೆ. ಈ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರೂಪದ ಬೆಲೆಬಾಳುವ ಅಂಬರ್ ಗ್ರೀಸ್ ಹಾಗೂ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
7 crore worh Ambergris seized by Mangalore CCB Police, two arrested while trying to sell at Kuntikan junction. Upon valid information received by CCB police, the raid was conducted under the orders of Mangalore Police Commissioner Anupam Agarwal.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm